Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಅಭ್ಯಾಸವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ಎಸ್‌ಇಪಿ ಜಾರಿಗೊಳಿಸಲಾಗುತ್ತಿದೆ ಎಂದರು.
ಪ್ರಸ್ತುತ ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್)ಗಳಿದ್ದು, ಅವು ಗಳನ್ನು 2 ಸಾವಿರಕ್ಕೆ ಏರಿಸಲಾಗುವುದು. ಪ್ರತೀ 2-3 ಗ್ರಾಪಂಗಳಿಗೆ ಒಂದು ಶಾಲೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಆರಂಭದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಿಂದ 3ರಷ್ಟು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 3 ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಕಟ್ಟಿ, ಉತ್ತೀರ್ಣರಾಗಿ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗಿದೆ. ಇದನ್ನು 10ನೇ ತರಗತಿಗೂ ವಿಸ್ತರಿಸಲಾಗು ತ್ತದೆ. ಈ ವರ್ಷ ಬೋರ್ಡ್ ಪರೀಕ್ಷೆ ಬರೆದ 1.30 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ಹೇಳಿದರು.
Related Articles
Advertisement
ಪ್ರಣವಾನಂದ ಸ್ವಾಮೀಜಿ ಈಡಿಗ ಸಮುದಾಯದ ನಾಯಕ ಅಲ್ಲ. ಅವರದ್ದು ಹಿನ್ನೆಲೆಯನ್ನು ತಿಳಿದುಕೊಳ್ಳಿ. ಹಿಂದುಳಿವ ವರ್ಗದ ಬಗ್ಗೆ ಕಾಳಜಿ ಅವರೊಬ್ಬರಿಗೇ ಇರುವುದಲ್ಲ. ಕಾಳಜಿ ಇರುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಮಧು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಡಿಸಿಸಿ ಹರೀಶ್ ಕುಮಾರ್, ಪಕ್ಷದ ಪ್ರಮುಖ ರಾದ ಬಿ. ಇಬ್ರಾಹಿಂ, ಅಭಯಚಂದ್ರ, ಜೆ.ಆರ್. ಲೋಬೊ, ಐವನ್ ಡಿ’ಸೋಜಾ, ಕೋಡಿಜಾಲ್ ಇಬ್ರಾಹಿಂ, ಪದ್ಮರಾಜ್ ಆರ್., ಎಂ.ಶಶಿಧರ ಹೆಗ್ಡೆ, ಕೃಪಾ ಆಳ್ವ, ಇನಾಯತ್ ಆಲಿ, ಶಾಲೆಟ್ ಪಿಂಟೋ, ಮಮತಾ ಗಟ್ಟಿ, ಪ್ರತಿಭಾ ಕುಳಾç ಮೊದಲಾದವರು ಉಪಸ್ಥಿತರಿದ್ದರು.
ದ.ಕ. ಲೋಕಸಭೆ ಕ್ಷೇತ್ರವೂ ಕಾಂಗ್ರೆಸ್ಗೆಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸುವ ಸವಾಲು ತೆಗೆದುಕೊಳ್ಳಲಿದ್ದೇವೆ. ಬಿಜೆಪಿಯವರು ಇಲ್ಲಿಯವರೆಗೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಗೆಲ್ಲುತ್ತಿದ್ದರು. ಮುಂದೆ ಅದರಿಂದಲೇ ಸೋಲನುಭವಿಸಲಿದ್ದಾರೆ. 2004ರ ಹಿಂದಿನ ಸ್ಥಿತಿ ಮತ್ತೆ ದ.ಕ. ಜಿಲ್ಲೆಯಲ್ಲಿ ಮರುಕಳಿಸಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿ ಮುಂಬರುವ ಲೋಕಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ವರದಿ ನೀಡಲು ವೀಕ್ಷಕರಿಗೆ 15 ದಿನ ಸಮಯಾವಕಾಶ ನೀಡಲಾಗಿದೆ ಎಂದು ಲೋಕಸಭಾ ಚುನಾವಣೆಯ ದ.ಕ. ಜಿಲ್ಲಾ ವೀಕ್ಷಕ-ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಿಜೆಪಿ ಜತೆ ಮೈತ್ರಿಗೆ ಮೊದಲು ಜೆಡಿಎಸ್‌ನವರು ಕಾಂಗ್ರೆಸ್ ಕೋಮುವಾದಿ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಕತೆ ಏನಾಯ್ತು? ದ.ಕ. ಸೇರಿದಂತೆ ಜೆಡಿಎಸ್‌ನ ರಾಜ್ಯ ಮಟ್ಟದ ಅನೇಕ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದರು.