ಲೋಕಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲ ವಾಗಿವೆ. ಇದರಿಂದ ದೇಶದ ಜನತೆಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಆರೋಪಿಸಿದರು. ಪಟ್ಟಣದಲ್ಲಿ ಜಿಲ್ಲಾ ಯುತ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡ ಕೊರೊನಾ ಸೋಂಕಿತರಿಗೆ ಹೋಂ ಐಸೋಲೇಷನ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಜ್ಞರ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ನಿರ್ಲಕ್ಷé ಮಾಡಿದೆ ಎಂದರು.
ಕೊರೊನಾ ಹೆಮ್ಮಾರಿ ಉಲ್ಬಣಗೊಂಡು ಆಮ್ಲಜನಕ, ವೆಂಟಿಲೇಟರ್, ಬೆಡ್‌ಗಳ ಕೊರತಯಿಂದ ಸಾವು ನೋವುಗಳು ಹೆಚ್ಚಾಗುತ್ತಿವೆ. ಸರ್ಕಾರ ಘೋಷಣೆ ಮಾಡಿದ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕವಾಗಿದೆ. ಇದು ಸಂಕಷ್ಟದಲ್ಲಿರುವ ಜನರ ಕಣ್ಣಿಗೆ ಮರೆಮಾಚುವ ತಂತ್ರವಾಗಿದೆ. ಸರ್ಕಾರ ಘೋಷಣೆ ಮಾಡಿದ ಪ್ಯಾಕೇಜ್‌ನ ಮೊತ್ತ ಸಾಲುವುದಿಲ್ಲ.ಇದನ್ನು ಮರುಪರಿಶೀಲಿಸಿ ಸೂಕ್ತವಾದ ಹೆಚ್ಚಿನ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಶಿವಾನಂದ ಉದಪುಡಿ ಮಾತನಾಡಿ, ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೊರೊನಾ ಪರೀಕ್ಷೆ ಕಡಿಮೆ ಮಾಡಿ ಸಾವಿನ ಅಂಕಿ ಅಂಶಗಳನ್ನು ಮರೆಮಾಚಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಮುಖಂಡ ಸತೀಶ ಬಂಡಿವಡ್ಡರ ಮಾತನಾಡಿ, ಕೊರೊನಾ ಬರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ ವತಿಯಿಂದ ಕಷಾಯ ಕಿಟ್ ಗಳನ್ನು ತಯಾರಿಸಿದ್ದು, ಮುಧೋಳ ತಾಲೂಕಿನಾದ್ಯಂತ ಪ್ರತಿ ಮನೆ ಮನೆಗೂ ತಲುಪಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಾಶಿನಾಥ ಹುಡೇದ, ಲೋಕಾಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಲೋಕಣ್ಣ ಕೊಪ್ಪದ, ಸುಭಾಸ ಗಸ್ತಿ, ಭೀಮಸೆಪ್ಪ ಹಲಕಿ, ಗೋವಿಂದ ಕೌಲಗಿ, ರಕ ಬೈರಕದಾರ, ಪಿಕೆಪಿಎಸ್ ಅಧ್ಯಕ್ಷ ಆನಂದ ಹಿರೇಮಠ, ವಿನಯ ತಿಮ್ಮಾಪುರ, ಜಿಲ್ಲಾ ಯುತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಕಲೂತಿ, ಚಿನ್ನು ಅಂಬಿ, ಮುಧೋಳ ಪ್ರಧಾನ ಕಾರ್ಯದರ್ಶಿ ರವಿ ಚವರಡ್ಡಿ, ಲೋಕಾಪುರ ಯುತ್ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ ತುಗಲಗಟ್ಟಿ, ಬದಾಮಿ ಯುತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾನಗೌಡ, ಗುಳೇದಗುಡ್ಡ ಯುತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ ಕಾಂಬಳೆ, ಕೃಷ್ಣಾ ಹೂಗಾರ, ಶಶಿಧರ ಬೆಳಗಲಿ ಇದ್ದರು.