Advertisement
ಬಾದಾಮಿಯ 55 ವರ್ಷದ ಪುರುಷ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಜುಲೈ 12ರಂದು ಸೋಂಕು ಖಚಿತಪಟ್ಟಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾನೆ. ಕೋವಿಡ್ ನಿಯಮಾವಳಿ ಪ್ರಕಾರ, ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ|ಪ್ರಕಾಶ ಬಿರಾದಾರ ತಿಳಿಸಿದ್ದಾರೆ.
ಬಾಗಲಕೋಟೆ ಶಹರ ಪೊಲೀಸ್ ಠಾಣೆಯ ಹವಾಲ್ದಾರ ಮತ್ತು ಓರ್ವ ಪೇದೆ, ಇಳಕಲ್ಲ ಗ್ರಾಮೀಣ ಠಾಣೆ, ತೇರದಾಳ ಠಾಣೆಯ ಪೇದೆ ಹಾಗೂ ರಬಕವಿ -ಬನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐಗೆ ಗುರುವಾರ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ನಾಲ್ಕು ಪೊಲೀಸ್ ಠಾಣೆಗಳನ್ನು ಗುರುವಾರ ಸೀಲ್‌ಡೌನ್ ಮಾಡಿದ್ದು , ಇಡೀ ಠಾಣೆಗೆ ಸ್ಯಾನಿಟೈಜನರ್ ಮಾಡಲಾಗಿದೆ. ನಾಲ್ಕು ಠಾಣೆಯ ಐವರು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ತಪಾಸಣೆಗೆ ಸೂಚಿಸಲಾಗಿದೆ. ಎರಡು ದಿನಗಳ ಕಾಲ ನಾಲ್ಕೂ ಪೊಲೀಸ್ ಠಾಣೆಗಳಲ್ಲಿ ಸ್ಯಾನಿಟೈಜರ್ ಮಾಡಿ , ಆ ಠಾಣೆಗಳ ಕಾರ್ಯ ನಿರ್ವಹಣೆಯನ್ನು ಪಕ್ಕದ ಬೇರೆ ಕಟ್ಟಡ ಇಲ್ಲವೇ ಸಮೀಪದ ಬೇರೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
Related Articles
ಎಸ್ಪಿ ಕಚೇರಿಯ ಕಂಪ್ಯೂಟರ್ ವಿಭಾಗದ 35 ವರ್ಷದ ಓರ್ವ ಪುರುಷ ಸಿಬ್ಬಂದಿಗೂ ಗುರುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಡೀ ಎಸ್ಪಿ ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ. ಆದರೆ, ಆ ಸಿಬ್ಬಂದಿ 8 ದಿನಗಳ ಹಿಂದೆ ವೈಯಕ್ತಿಕ ಕೆಲಸಕ್ಕಾಗಿ ರಜೆ ಹಾಕಿದ್ದು, ರಜೆಯ ಮೇಲಿದ್ದಾಗಲೇ ಸೋಂಕಿನ ಲಕ್ಷಣ ಕಂಡಾಗ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಕೋವಿಡ್ ದೃಢಪಟ್ಟಿದೆ. ಇದರಿಂದ ಕಚೇರಿಯ ಇತರೆ ಸಿಬ್ಬಂದಿಗಳು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿಲ್ಲ. ಆದರೂ, ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ ಎಂದು ಎಸ್ಪಿ ಲೋಕೇಶ ತಿಳಿಸಿದ್ದಾರೆ.
Advertisement