Advertisement
ಹೌದು, ಶನಿವಾರ ತಾಲೂಕಿನ ತುಳಸಿಗೇರಿಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯದ ವೇಳೆ ಇದು ಕಂಡು ಬಂದಿತು. ಜಿಲ್ಲಾಧಿಕಾರಿ ಸ್ವಾಗತಕ್ಕೆ (ಸಚಿವರು, ಶಾಸಕರಿಗೆ ಹಾಕುವ ರೀತಿ) ದೊಡ್ಡ ಸ್ವಾಗತ ಕಮಾನ ಹಾಕಿ ಸ್ವಾಗತದ ಕಟೌಟ್ ಹಾಕಲಾಗಿತ್ತು. ಬಳಿಕ ಹೂವುಗಳಿಂದ ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಗ್ರಾಪಂ ಕಚೇರಿವರೆಗೂ ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ನಂತರ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಡಿಸಿ ಅವರನ್ನು ರೇಷ್ಮೆ ರುಮಾಲು ಸುತ್ತಿ, ತುಳಸಿಗೇರಿಯ ಆಂಜನೇಯ ಭಾವಚಿತ್ರ ನೀಡಿ ಸನ್ಮಾನಿಸಿದರು.
Related Articles
Advertisement
ನ್ಯಾಯಬೆಲೆ ಅಂಗಡಿ, ಗಡಿಮನೆ, ಜಿಮ್ ಹಾಗೂ ರಾಷ್ಟ್ರಧ್ವಜದ ಬಟ್ಟೆ ನೇಯ್ಗೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ರಾಷ್ಟ್ರಧ್ವಜ ಬಟ್ಟೆ ನೇಯ್ಗೆಯ ಕಾರ್ಮಿಕರಿಗೆ ದಿನಗೂಲಿ ಹೆಚ್ಚಳ ಮಾಡುವಂತೆ ಮನವಿ ಮಾಡಿಕೊಳ್ಳಲಾಯಿತು. ರಾಷ್ಟ್ರಧ್ವಜದ ಬಟ್ಟೆಯನ್ನು ತಯಾರಿಸುವ ನೇಕಾರಿಗೆ ಸರಕಾರದಿಂದ ಸಹಾಯಧನ ದೊರಕಿಸಿಕೊಡಬೇಕು. ಈ ಕೇಂದ್ರದಲ್ಲಿ 100 ಜನ ಮಹಿಳೆಯರು ಕೆಲಸ ಮಾಡುತ್ತಿದ್ದು, ಬೆಳಿಗ್ಗೆಯಿಂದ ಸಂಜೆಯವರೆಗೂ ದುಡಿದರೆ 120ರೂ.ಗಳ ಕೂಲಿ ಮಾತ್ರ ದೊರೆಯುತ್ತಿರುವದನ್ನು ಕಂಡು ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.
ಡಿಸಿಯನ್ನು ಸ್ವಾಗತಿಸಿದ ಮಕ್ಕಳು: ಅಂನಗವಾಡಿ ಕೇಂದ್ರ ನಂ.2ರಲ್ಲಿ ಬಸವಣ್ಣ, ಕಿತ್ತೂರ ರಾಣಿ ಚನ್ನಮ್ಮ ಹೀಗೆ ವಿವಿಧ ವೇಷಭೂಷಣ ಹಾಕಿದ ಮಕ್ಕಳು ಜಿಲ್ಲಾಧಿಕಾರಿಗಳನ್ನು ವಿಶೇಷವಾಗಿ ಸ್ವಾಗತಿಸಿದರು. ಮಕ್ಕಳೊಂದಿಗೆ ಅನ್ಯೋನ್ಯವಾಗಿ ಬೆರೆತ ಜಿಲ್ಲಾಧಿಕಾರಿ ಅವರ ಹೆಸರು ಕೇಳಿದರು. ಇದೇ ವೇಳೆ ಮಕ್ಕಳು ಹಾಡು ಹೇಳಿ ಗಮನ ಸೆಳೆದರು. ಮದುವೆಯಾಗದೇ ಮನೆಯಲ್ಲಿಯೇ ಮಾನಸಿಕವಾಗಿ ಅಸ್ವಸ್ಥರಾದ ಮಹಿಳೆಗೆ ಪಿಂಚಣಿ ಸೌಲಭ್ಯ ಕಲ್ಪಿಸುವ ಬೇಡಿಕೆಯನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕ್ಕಾಗಿ ಸೂಚಿಸಿದರಲ್ಲದೇ ಸಂಬಂಧಪಟ್ಟ ಸೈಕಾಟ್ರಿಸ್ಟ್ ಕಡೆ ಪರೀಕ್ಷೆ ಮಾಡಿಸಲು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಪಂ ಸದಸ್ಯರಾದ ಹೂವಪ್ಪ ರಾಠೊಡ, ಶೋಭಾ ಬಿರಾದಾರ, ಗ್ರಾಪಂ. ಅಧ್ಯಕ್ಷೆ ಮಂಜುಳಾ ಭಂಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಭೂದಾಖಲೆ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕ ಎ.ಕೆ.ಬಸಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ, ತಾಪಂ ಇಒ ಎನ್.ವೈ. ಬಸರಿಗಿಡದ ಉಪಸ್ಥಿತರಿದ್ದರು.