Advertisement
ನವನಗರದ ಡಾ| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಪೂರ್ವಜರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಆಗ ಮಾತ್ರ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ. ಬಸವಾದಿ ಪ್ರಮತರ ಸಾಲಿನಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯ ಸ್ಥಾನ ಪಡೆದವರಾಗಿದ್ದು, ಅವರ ಆದರ್ಶ ಮತ್ತು ತತ್ವ ಪಾಲಿಸಲು ತಿಳಿಸಿದರು. ಅಥಣಿ ತಾಲೂಕಿನ ಜಿಂಜವಾಡದ ಬಸವರಾಜೇಂದ್ರ ಶರಣರು ಉಪನ್ಯಾಸ ನೀಡಿದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ದುರಗೇಶ ರುದ್ರಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಕಂದಾಯ ಇಲಾಖೆ ಶಿರಸ್ತೇದಾರ ಎಂ.ಬಿ. ಗುಡೂರ, ಗೋಪಾಲ ಮಡಿವಾಳರ ಇದ್ದರು. ಇದಕ್ಕೂ ಮುಂಚೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ವಿವಿಧೆಡೆ ಸಂಚರಿಸಿ ಡಾ|ಬಿ.ಆರ್. ಅಂಬೇಡ್ಕರ್ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವರು. ಕುಂಭ ಹೊತ್ತ ಮಹಿಳೆಯರು ಮೆರವಣಿಗೆ ಕೇಂದ್ರ ಬಿಂದು ಆಗಿದ್ದರು.
ಭಾರತ ಗ್ರಾಮಗಳಿಂದ ಕೂಡಿದ ದೇಶ. ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಉತ್ತಮ ನಾಗರಿಕ, ಮಾನವೀಯ, ಸಂಸ್ಕೃತಿ ಕಾಪಾಡಿಕೊಳ್ಳಬೇಕಾದರೆ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಬೇಕು. ಆಗ ಮಾತ್ರ ಸುಂದರ, ಸ್ವಚ್ಛ ಸಮಾಜ ನಿರ್ಮಾಣ ಮಾಡಲು ಸಾಧ್ಯ.•ಆರ್. ರಾಮಚಂದ್ರನ್, ಜಿಲ್ಲಾಧಿಕಾರಿ