ಬಾಗಲಕೋಟೆ: ನಿರಂತರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಗ್ರಾಮದ ಮಲಪ್ರಭಾ ನದಿಯ ಹಳೆ ಸೇತುವೆ ಜಲಾವೃತ ಗೊಂಡಿದೆ.
ಜಲಾಶಯದಿಂದ 5000 ಕ್ಯೊಸೆಕ್ ನೀರು ಹರಿ ಬಿಟ್ಟ ಹಿನ್ನೆಲೆ ಗೋವನಕೊಪ್ಪ ಚಿಕ್ಕ ಸೇತುವೆ ಜಲಾವೃತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ಮೂಲಕ ಮಾತ್ರ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.
ಇದನ್ನೂ ಓದಿ:ಕೃಷಿ ಹೊಂಡದ ನೀರಿಗೆ ವಿಷ ಹಾಕಿದ ಕಿಡಿಗೇಡಿಗಳು: ಮೀನುಗಳ ಸಾವು
ಇನ್ನು ಬಿತ್ತನೆಗೆ ಭೂಮಿ ಹದ ಮಾಡಿದ್ದ ರೈತರು ಜಮೀನುಗಳಿಗೆ ಪ್ರವಾಹದ ನೀರು ನುಗ್ಗಿದ್ದು, ಪ್ರವಾಹದ ನೀರಿನಿಂದ ನದಿ ಪಾತ್ರದ ರೈತರಲ್ಲಿ ಆತಂಕ ಮನೆಮಾಡಿದೆ. ಪ್ರವಾಹದ ಹಿನ್ನೆಲೆಯಲ್ಲಿ ಮಲಪ್ರಭಾ ಹಳೆ ಸೇತುವೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.