ಬಾಗಲಕೋಟೆ : ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾದ ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವನಗರದ ಸೆಕ್ಟರ್ ನಂ.16ರಲ್ಲಿ ತಡರಾತ್ರಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ನ್ಯಾಯಾಧೀಶರನ್ನು ಮಾನಪ್ಪ ತಳವಾರ (53) ಎಂದು ಗುರುತಿಸಲಾಗಿದೆ.
ನ್ಯಾಯಾಧೀಶರಾದ ಮಾನಪ್ಪ ತಳವಾರ ಅವರು ಕಲಬುರಗಿ ಜಿಲ್ಲೆಯ ಚಿತ್ತಾಪುರದ ನ್ಯಾಯಾಲಯದಲ್ಲಿ ನ್ಯಾಯಾಧಿಶರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ನ್ಯಾಯಾಧೀಶರು, ಇಬ್ಬರು ಪತ್ನಿ ಹೊಂದಿದ್ದರು ಎನ್ನಲಾಗಿದ್ದು, ಹೀಗಾಗಿ ಅವರಿಗೆ ಕಡ್ಡಾಯ ನಿವೃತ್ತಿ ಕೊಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. 2ನೇ ಮದುವೆಯಾದ ಮೇಲೆ ಈ ಕಡ್ಡಾಯ ನಿವೃತ್ತಿ ನೀಡಲಾಗಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಮೂಲತಃ ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದ ಮಾನಪ್ಪ ತಳವಾರ ಅವರು, ನವನಗರದಲ್ಲಿ ವಾಸವಾಗಿದ್ದರು.
ನವನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ವಿದ್ಯುತ್ ವ್ಯತ್ಯಯ :ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ