ಕಂದಗಲ್ಲ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಳಕಲ್ಲ ತಾಲೂಕಿನ ಗುಗ್ಗಲಮರಿ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಗುಗ್ಗಲಮರಿ ಗ್ರಾಮದ ರಾಗಿಣಿ ದುರಗಪ್ಪ ಹುಣಸ್ಯಾಳ (11 ವರ್ಷ) ಎಂದು ಗುರುತಿಸಲಾಗಿದೆ.
ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ನಿಂದ ಬಿದ್ದ ಬಾಲಕಿಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್‌ಲ್ಲಿದ ಉಳಿದವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್‌ಐ ಮಲ್ಲು ಸತ್ತಿಗೌಡರ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Belagavi: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯ ಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ