Advertisement

ಬಾಗಲಕೋಟೆ: ಕೋವಿಡ್‌ಗೆ ಮತ್ತೋರ್ವ ವೃದ್ಧೆ ಸಾವು

07:13 PM Jul 04, 2020 | Sriram |

ಬಾಗಲಕೋಟೆ : ಕೋವಿಡ್-19 ಸೋಂಕಿನಿಂದ ಜಿಲ್ಲೆಯ 94 ವರ್ಷದ ವೃದ್ಧೆಯೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ 94 ವರ್ಷದ ವೃದ್ಧೆ ಹೃದಯ ಸಂಬಂಧಿಕಾಯಿಲೆಯಿಂದ ಬಳಲುತ್ತಿದ್ದಳು. ಅವರನ್ನು ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶುಕ್ರವಾರ ರಾತ್ರಿಯೇ ಮೃತಪಟ್ಟಿದ್ದಾರೆ.

ಮುಂಜಾಗೃತೆಯಾಗಿ,ವೃದ್ಧೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದು, ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಆದರೆ, ವೃದ್ಧೆ, ಹೃದಯಾಘಾತದಿಂದ ಮೃತಪಟ್ಟಿದ್ದು, ತಕ್ಷಣ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿತ್ತು. ಕೋವಿಡ್ 19 ತಪಾಸಣೆ ವರದಿ ಬರುವ ಮುನ್ನವೇ ಸಂಬಂಧಿಕರು, ಕುಟುಂಬಸ್ಥರು, ಹಿಪ್ಪರಗಿಯಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಹೀಗಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದವರು, ಕುಟುಂಬಸ್ಥರು ಸಹಿತ ಸುಮಾರು 34 ಜನರನ್ನು ಹಿಪ್ಪರಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ.

ಸಾವಿನ ಸಂಖ್ಯೆ 7ಕ್ಕೆ ಏರಿಕೆ 
ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮೃತಪಟ್ಟ ಹಿಪ್ಪರಗಿಯ ವೃದ್ಧೆವಿಜಯಪುರದಲ್ಲಿ, ಕಲಾದಗಿಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಇನ್ನುಳಿದ ಐದು ಜನರು ಬಾಗಲಕೋಟೆಯಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ, ಚಿಕ್ಕಮ್ಯಾಗೇರಿಯ ರೈಲ್ವೆ ಟಿಕೆಟ್ ಕಲೆಕ್ಟರ್, ಬಾಗಲಕೋಟೆ ನವನಗರದ ಸೆಕ್ಟರ್ನಂ.57ರ ನಿವಾಸಿ, ಹಳೆಯ ನಗರದ 76 ವರ್ಷದ ವೃದ್ಧ, ಮುಡಪಲಜೀವಿ ಗ್ರಾಮದ 50 ವರ್ಷದ ವೃದ್ಧ ಒಳಗೊಂಡು ಐವರು ಈ ವರೆಗೆ ಕೋವಿಡ್19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Advertisement

ಶನಿವಾರದ ವರೆಗೆ ಜಿಲ್ಲೆಯಲ್ಲಿ 226 ಜನರಿಗೆ ಸೋಂಕು ತಗುಲಿದ್ದು, ಕೋವಿಡ್ ಆಸ್ಪತ್ರೆಯಿಂದ ಒಟ್ಟು 137 ಜನ ಕೋವಿಡ್ ಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next