ಬಾಗಲಕೋಟೆ: ಸರಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಗಾಗಿ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸುವಂತೆ ಜಿಪಂ ಸಿಇಒ ಶಶಿಧರ ಕುರೇರ, 15 ದಿನಗಳ ಗಡುವು ನೀಡಿದರು.
Advertisement
ಜಿಪಂ ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಅಗ್ರಣಿ ಬ್ಯಾಂಕ್‌ನಿಂದ ಜರುಗಿದ ಬ್ಯಾಂಕರ್ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರದ ಯೋಜನೆಗಳಿಗೆ ಬ್ಯಾಂಕುಗಳು ಸಾಲ ಕೊಡದೇ ಇದ್ದರೆ ಹೇಗೆ. ಹೀಗಾದರೆ ಯೋಜನೆಗಳು ಹೇಗೆ ಅನುಷ್ಠಾನಗೊಳ್ಳಬೇಕು ಎಂದು ಪ್ರಶ್ನಿಸಿದರು. ಕಾಟಾಚಾರಕ್ಕೆ ಸಭೆಗೆ ಬರಬೇಡಿ, ಕೇವಲ ಸಭೆ ನಡೆಸುವುದು, ನಿರ್ದೇಶನ ನೀಡುವುದು ಆಗುತ್ತಿದೆ. ಯಾವುದೇ ರೀತಿಯ ಕೆಲಸವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಭಾರತೀಯ ರಿಸರ್ವ್ ಬ್ಯಾಂಕಿನ ಅಗ್ರಣೀಯ ಜಿಲ್ಲಾ ಅಧಿಕಾರಿ ಜಯಶ್ರೀ ಮಾತನಾಡಿ, ಆರ್ಥಿಕ ಸಾಕ್ಷರತೆಯನ್ನು ಉತ್ತೇಜಿಸುವ ಉದ್ದೇಶದಿಂದ 2024ರ ಆರ್ಥಿಕ ಸಪ್ತಾಹವನ್ನು ಜೂನ್ 26 ರಿಂದ ಮಾರ್ಚ 1, 2024ವರೆಗೆ ಸರಿಯಾಗಿ ಪ್ರಾರಂಭಿಸಿ-ಆರ್ಥಿಕವಾಗಿ ಸಾರ್ಟ್ ಆಗಿರಿ ಎಂಬ ವಿಷಯದ ಮೇಲೆ ಆಚರಿಸಲಾಗುತ್ತಿದೆ. ಈ ವರ್ಷ ಯುವ ವಯಸ್ಕರನ್ನು ಮುಖ್ಯವಾಗಿ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಳ್ಳಲಾಗಿದೆ. ಚಿಕ್ಕ ವಯಸ್ಸಿನಿಂದಲೇ ಆರ್ಥಿಕ ಶಿಸ್ತು ರೂಢಿಸಿಕೊಳ್ಳುವ ಪ್ರಯೋಜನಗಳ ಬಗ್ಗೆ ಅರಿವುಮೂಡಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಸಾಲ ಯೋಜನೆಯ ಮಾರ್ಗದರ್ಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ನಬಾರ್ಡನ ಡಿಡಿಎಂ ಮಂಜುನಾಥ ರೆಡ್ಡಿ, ಕೆನರಾ ಬ್ಯಾಂಕಿನ ರಿಸನಲ್ ಮ್ಯಾನೇಜರ್ ಶೈಲಜಾ ಕೆ.ಎಂ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ರಿಜಿನಲ್ ಮ್ಯಾನೇಜರ್ ರಾಜಶೇಖರ, ಜಿಲ್ಲಾ ಪಂಚಾ ಯತಿಯ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಮುಂತಾದವರು ಉಪಸ್ಥಿತರಿದ್ದರು.