ರಬಕವಿ-ಬನಹಟ್ಟಿ: ತಾಲೂಕಿಗೆ ಕೃಷಾ ನದಿ ಹಾಗೂ ಘಟಪ್ರಭಾ ನದಿ ಪ್ರಮುಖ ನೀರಿನ ಜಲ ಮೂಲಗಳಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ, ಹಾರುಗೇರಿ ಅಥಣಿ ಹಾಗೂ ಬೆಳಗಾವಿ ಬಾಗಲಕೋಟೆ ಜಿಲ್ಲೆಯ ಪ್ರಮುಖ ನಗರ ಹಾಗೂ
ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಹಾಹಾಕಾರ ಆರಂಭವಾಗುವ ಸಂಭವವಿದೆ.
Advertisement
ಏಪ್ರಿಲ್ ಎರಡನೇ ವಾರದವೆಗೆ ನೀರು ಸಾಕಾಗಬಹುದು ಎಂಬುದು ಅಧಿಕಾರಿಗಳ ಅಂಬೋಣ. ಅಲ್ಲದೇ ಬಿಸಿಲಿನ ತಾಪಮಾನ, ನೀರಿನ ಮಟ್ಟದಲ್ಲಿ ಕುಸಿತ, ಸರಿಯಾದ ಮಳೆಯಾಗದಿರುವ ಹಿನ್ನೆಲೆಯಲ್ಲಿ ಮುಂದಿನ ಎರಡುವರೆ ತಿಂಗಳುಗಳ ಕಾಲ ನೀರಿನಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿದೆ. ಜಲಮೂಲಗಳಾದ ಕೆರೆ, ಕೊಳವೆಬಾವಿ, ಬೋರ್ ವೆಲ್‌ಗಳು ಬತ್ತುವ ಆತಂಕ ಎದುರಾಗಿದೆ.
ಮಾತ್ರ ಸಂಗ್ರಹವಿದ್ದು, ಅಧಿಕಾರಿಗಳ ಪ್ರಕಾರ ಪ್ರತಿ ತಿಂಗಳಿಗೆ 1 ಟಿಎಂಸಿಯಷ್ಟು ನೀರು ಹಿಪ್ಪರಗಿ ಜಲಾಶಯದಿಂದ ಬಳಕೆಯಾಗುತ್ತಿದೆ. ಆದರೆ ಬಿಸಿಲಿನ ತಾಪಮಾನ ಹಾಗೂ ಜಲಾಶಯದ ಮುಂದಿನ ಭಾಗಕ್ಕೆ ಕುಡಿಯುವ ನೀರು ಹಾಗೂ ಜನ ಜಾನುವಾರುಗಳಿಗೆ ನೀರು ಒದಗಿಸಬೇಕಾಗುವ ಕಾರಣ 2 ಟಿಂಸಿ ಒಂದು ತಿಂಗಳಿಗೂ ಸಾಲುವುದಿಲ್ಲ. ಹಿಪ್ಪರಗಿ ಜಲಾಶಯದ ಮುಂಭಾಗ ಸಂಪೂರ್ಣವಾಗಿ ಖಾಲಿಯಾಗಿರುವುದರಿಂದ ಭೀಕರ ಜಲಕ್ಷಾಮದ ಭೀತಿ ಎದುರಾಗಿದೆ. ತಾಲೂಕಿನ ಅವಳಿ ನಗರಗಳಲ್ಲಿ ಉಂಟಾಗುತಿದ್ದ ನೀರಿನ ಭವಣೆ ಸದ್ಯಕ್ಕೆ ಕಂಡುಬರುತ್ತಿಲ್ಲ. ಆದರೂ ಮುಂದಿನ
ದಿನಮಾನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ನಗರಸಭೆ ವತಿಯಿಂದ ಕೃಷ್ಣಾ ನದಿಯಿಂದ ಜಾಕ್‌ವೆಲ್ ಮೂಲಕ ನೀರಿನ ವ್ಯವಸ್ಥೆ ಮಾಡುತ್ತಿದ್ದು, ಅಲ್ಲದೇ ಪ್ರತಿ ವಾರ್ಡ್‌ಗಳಲ್ಲಿ ಕೊಳವೆ ಬಾವಿ ಕೊರೆಸಿದ್ದು ಅವುಗಳ ಮೂಲಕ ನೀರು ಪೂರೈಸುವ ಸಲುವಾಗಿ ಅಗತ್ಯ ಕ್ರಮ ತೆಗೆದುಕೊಂಡಿದೆ. ಅಲ್ಲದೇ ನಗರಸಭೆ ವ್ಯಾಪ್ತಿಯ 85 ಖಾಸಗಿ ಕೊಳವೆ ಬಾವಿ ಗುರುತಿಸಲಾಗಿದೆ. ಆ ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್ ನ್ನು ನಗರಸಭೆಯಿಂದ ಪಾವತಿಸಿ ಬೇಸಿಗೆ ನಿಭಾಯಿಸಲು ಅಧಿಕಾರಿಗಳು ಸಿದ್ಧತೆ
ಮಾಡಿಕೊಂಡಿದ್ದಾರೆ.
Related Articles
ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಕೊಳವೆ ಬಾವಿ, ಕೆರೆ ಇತರೆ ಸಂಪನ್ಮೂಲ ಬಳಸಿಕೊಂಡು ನೀರಿನ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ
Advertisement
ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ 338 ಕೊಳವೆ ಬಾವಿಗಳಿವೆ. ಅದರಲ್ಲಿ 326 ಕಾರ್ಯ ಮಾಡುತ್ತಿವೆ. ಉಳಿದ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. 13 ತೆರೆದ ಬಾವಿಗಳು ಇದ್ದು, ಅವುಗಳನ್ನು ಕೂಡಾ ಸ್ವತ್ಛಗೊಳಿಸಿ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು ಮತ್ತು 85 ಖಾಸಗಿ ಕೊಳವೆ ಬಾವಿ ಗುರುತಿಸಲಾಗಿದೆ.ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್‌ನ್ನು ನಗರಸಭೆಯಿಂದ ಪಾವತಿಸಲಾಗುವುದು.*ಜಗದೀಶ ಈಟಿ, ಪೌರಾಯುಕ್ತರು, ನಗರಸಭೆ, ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಸದ್ಯ ಸುಮಾರು ಒಂದುವರೆ ತಿಂಗಳ ಕಾಲ ನೀರಿನ ಸಮಸ್ಯೆ ಇಲ್ಲ., ಈ ಕುರಿತು ನದಿ ನೀರು ಬತ್ತಿ ಸಮಸ್ಯೆ ಆಗುವ ಮೊದಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ಆ ನಿಟ್ಟಿನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಎಲ್ಲಿ ಸಮಸ್ಯೆ ಆಗುತ್ತದೆಯೋ ಅಲ್ಲಲ್ಲಿ ನಿವಾರಣೆಗೆ ತಾಲೂಕು ಆಡಳಿತ ಸಜ್ಜಾಗಿದೆ.
*ಗಿರೀಶ ಸ್ವಾದಿ ತಹಶೀಲ್ದಾರ್,
ರಬಕವಿ-ಬನಹಟ್ಟಿ ಬರ ಎದುರಿಸುವ ನಿಟ್ಟಿನಲ್ಲಿ ಈಗಾಲೇ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆದಿದ್ದು, ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದುರಾಗುತ್ತದೆ ಎಂಬುದರ ಬಗ್ಗೆ ಪಟ್ಟಿ ಮಾಡಲಾಗಿದೆ. ಮೊದಲು ಬೋರವೆಲ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಬರ ಪರಸ್ಥಿತಿ ಹೆಚ್ಚಾದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಸಿದ್ಧರಿದ್ದು, ಈ ಕುರಿತು ಟೆಂಡರ್
ಕರೆಯಲಾಗಿದೆ. ಒಟ್ಟಾರೆ ಈ ಕುರಿತು ಅಗತ್ಯ ಕ್ರಮ ತೆಗೆದುಕೊಂಡು, ನೀರಿನ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ.
*ಸಿದ್ದಪ್ಪ ಪಟ್ಟಿಹಾಳ, ಕಾರ್ಯನಿರ್ವಹಣಾಧಿಕಾರಿ, ತಾಪಂ, ರಬಕವಿ-ಬನಹಟ್ಟಿ *ಕಿರಣ ಶ್ರೀಶೈಲ ಆಳಗಿ