ಬಾಗಲಕೋಟೆ: ಮಕ್ಕಳೇ ದೇಶದ ಆಸ್ತಿಯಾಗಿದ್ದು, ಮಕ್ಕಳ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಕಾಯ್ದೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಹೇಳಿದರು.
Advertisement
ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿಂದು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಣಿ ಅಧಿಕಾರಿಗಳು, ಜನನ ಮತ್ತುಮರಣ ನೊಂದಣಿ ಕಚೇರಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಬಾಲನ್ಯಾಯ ಮಕ್ಕಳ ಪಾಲನೆ ಕಾಯ್ದೆ ಮತ್ತು ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸುವ ಕುರಿತು ಒಂದು ದಿನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕುಟುಂಬದ ಆಸ್ತಿಯಾಗಿದ್ದು, ಅವರ ಮೇಲೆ ಕಾಳಜಿ ವಹಿಸುವುದು ಇಂದು ಅಗತ್ಯವಾಗಿದೆ. ಆದ್ದರಿಂದ ತರಬೇತಿಗೆ ಹಾಜರಾದವರು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
Related Articles
Advertisement
ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ತೇಜಸ್ವಿನಿ ಹಿರೇಮಠ, ಸರ್ಚ್ ಸ್ವೀಕಾರ ಕೇಂದ್ರದ ಮುಖ್ಯಸ್ಥ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸುಮಂಗಳಾ ಹಿರೇಮನಿ, ಮಕ್ಕಳ ರಕ್ಷಣಾ ಅಧಿಕಾರಿ ಕೇಸವದಾಸ ಮುಂತಾದವರು ಉಪಸ್ಥಿತರಿದ್ದರು.