ರಬಕವಿ-ಬನಹಟ್ಟಿ: ಬನಹಟ್ಟಿ ಪಟ್ಟಣದ ಸರಕಾರಿ ಶಾಲೆಯಲ್ಲಿ ಎರಡು ಗುಂಪಿನ ಮಧ್ಯೆ ವಾಗ್ವಾದವಾಗಿ ಕಲ್ಲು ತೂರಾಟ ಘಟನೆ ನಡೆದಿದ್ದು, ಇದು ಒಂದು ಕೆಟ್ಟ ಬೆಳವಣಿಗೆ ಯಾಗಿದೆ ಈ ಘಟನೆಯಲ್ಲಿ ಯಾವುದೇ ಸಮುದಾಯದವರಾಗಿರಲಿ ಕಲ್ಲು ತೂರಾಡುವ ಕಿಡಿಗೇಡಿತನ ಮಾಡಿದವರ ವಿರುದ್ಧ ನಿರ್ದಾಕ್ಷಣ್ಯವಾಗಿ ನಿಷ್ಟೂರವಾಗಿ ಕಾನೂನು ಕ್ರಮ ತೆಗೆದುಕೊಂಡು ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹೇಳಿದರು.
ಅವರು ಬನಹಟ್ಟಿಯಲ್ಲಿ ಮಂಗಳವಾರ ಹಿಜಾಬ್ ಮತ್ತು ಕೇಸರಿ ಶಾಲು ಕುರಿತು ಎರಡು ಗುಂಪಿನ ಮಧ್ಯೆ ನಡೆದ ಕಲ್ಲು ತೂರಾಟದ ಬಳಿಕ ಬನಹಟ್ಟಿಗೆ ಭೇಟ್ಟಿ ಕೊಟ್ಟು ಬನಹಟ್ಟಿ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೇಡಿಕೆಗಳ ಕುರಿತು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಯಾವುದೇ ಕಾರಣಕ್ಕೂ ಯಾವುದೇ ಗುಂಪು ಶಾಂತಿಯುತವಾಗಿ ಪ್ರತಿಭಟಿಸಬೇಕು. ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗುಂಪುಗಾರಿಕೆ ಮಾಡಿಕೊಂಡು ಕಲ್ಲು ತುರಾಟ ಮಾಡುವುದು ಒಂದು ಕೆಟ್ಟ ಬೆಳವಣಿಗೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳಿಯವಾಗಿ ಪರಿಶೀಲನೆ ಮಾಡಲು ಬಂದಿದ್ದೇನೆ.
ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳಿದ್ದರೆ. ಅದನ್ನು ಶಾಂತಿಯುತವಾಗ ಪ್ರತಿಭಟನೆ ಮಾಡಬೇಕು. ತಮ್ಮ ಹಕ್ಕೋತ್ತಾಯ ಎಷ್ಟು ಸಮಂಜಸ ಎನ್ನುವುದನ್ನು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಅನಾವಶ್ಯಕವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಕಾಗುತ್ತದೆ. ಅದ್ದರಿಂದ ಇದನ್ನು ಗಮನದಲ್ಲಿಟ್ಟು ಕೊಳ್ಳಬೇಕು. ಪಾಲಕರು ಸಹಿತ ಇದಕ್ಕೆ ಮಕ್ಕಳಿಗೆ ತಿಳಿಹೇಳಬೇಕು. ತಮ್ಮ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಕಿಡಿಗೇಡಿಗಳಿಗೆ ಯಾವುದೇ ಸೊಪ್ಪು ಹಾಕದೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಗಳ ಹೊತೆಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.