Advertisement
ಈ ವೇಳೆ ಎಐಡಿಎಸ್‌ಒ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯೆ ಶಿಲ್ಪಾ ಬಿ.ಕೆ. ಮಾತನಾಡಿ, ಕರ್ನಾಟಕ ರಾಜ್ಯದ ಶಿಕ್ಷಣ ಗುಣಮಟ್ಟ ಹೆಚ್ಚಾಗಲು, ಕೌಶಲ್ಯ ಶಿಕ್ಷಣ ಕ್ರಿಯಾಶೀಲವಾಗಿ ಕಾರ್ಯರೂಪಕ್ಕೆ ಬರಬೇಕಾದರೆ, ವಿದ್ಯಾರ್ಥಿಗಳ ಬೌದ್ಧಿಕ ಶಿಕ್ಷಣಕ್ಕೆ ಶಕ್ತಿ ತುಂಬಬೇಕಾದರೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ ಖಾಯಂಮಾತಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರೊ.ನಾಗಯ್ಯ ಜ್ಯೋತೆಪ್ಪನವರ, ಸುನಿಲ್ ಮಠಪತಿ ಡಾ|ಸಂತೋಷ ಕಾಳನ್ನವರ, ಜಗದೀಶ ಮೊಗೂ°ರ, ಎಂ.ವೈ. ಬಡಿಗೇರ, ಡಾ|ಪಿ.ಕೆ. ಕಾರಬರಿ, ಪ್ರೊ.ಕರಿಗೌಡರ ಪಾಲ್ಗೊಂಡಿದ್ದರು.
Related Articles
Advertisement
ಈ ವೇಳೆ ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಶಿಲ್ಪಾ .ಬಿ.ಕೆ ಮಾತನಾಡಿ, ಈಗಾಗಲೇ ತಮ್ಮ ಸೂಕ್ತ ಗಮನದಲ್ಲಿರುವಂತೆ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ ಎಂದರು.
ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟ ಆತಂಕಕ್ಕೆ ತಳ್ಳಿದೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು. ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಕಾವೇರಿ ಬಿ.ಆರ್, ತೇಜಸ್ವಿನಿ ಪೂಜಾರಿ, ನಿರ್ಮಲಾ ಭಾವಿಕಟ್ಟಿ, ಕಮಲಾ ಕರಿಗೌಡರ, ಸೌಂದರ್ಯ ಹಾಲಿಮನಿ, ಸೌಂದರ್ಯ
ಬೈಲಕೋಡ ಅನೇಕ ಮುಂತಾದವರು ಪಾಲ್ಗೊಂಡಿದ್ದರು.