Advertisement
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದಿಂದ ಹಾನಿಯಾಗಿರುವುದಕ್ಕೆ ನಾವು ಕೇಳಿದ್ದು 16 ಸಾವಿರ ಕೋಟಿ ರೂ. ಆದರೆ, ಕೇಂದ್ರ ಸರ್ಕಾರ ನಮಗೆ ಎನ್‌ಡಿಆರ್‌ಎಫ್ ಹಣವನ್ನೂಸಹ ನೀಡಿಲ್ಲ. ಜತೆಗೆ ರೈತರು ತುಂಬಿದ ಬೆಳೆ ವಿಮೆಗೂ ಪರಿಹಾರ ನೀಡಿಲ್ಲ ಎಂದು ಕೇಂದ್ರದ ಧೋರಣೆ ವಿರುದ್ಧ ಕಿಡಿಕಾರಿದರು.
Related Articles
Advertisement
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ದೇಶ ಆರ್ಥಿಕವಾಗಿ ಹಿಂದುಳಿದಿದೆ. ದೇಶ ಮುಂದೆ ಬರಬೇಕಾದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಿಂದ ಹೋಗಲಾಡಿಸಬೇಕಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕಾರ್ಯಕರ್ತರು ಕೆಲಸ ಮಾಡುವ ಮೂಲಕ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ, ಮುಖಂಡರಾದ ಸಿದ್ದು ಕೊಣ್ಣೂರ, ನಾಗರಾಜ ಹದ್ಲಿ ಉಪಸ್ಥಿತರಿದ್ದರು.