Advertisement

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

11:57 AM Oct 18, 2024 | Team Udayavani |

ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಚಿತ್ರದ ಮೊದಲ ಹಾಡು ರುಧಿರ ಧಾರಾ ಉಘೇ ಉಘೇ .. ಮಾರ ಮಾರ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಡಾ.ಸೂರಿ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ಬಘೀರ ಚಿತ್ರದಲ್ಲಿ ಪೊಲೀಸ್‌ ಅವತಾರದಲ್ಲಿ ಶ್ರೀಮುರಳಿ ನಟಿಸಿದ್ದಾರೆ.

Advertisement

ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್‌ ರಾಜ್, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್‌ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ. ತಾಂತ್ರಿಕ ಬಳಗದಲ್ಲಿ ಎ.ಜೆ ಶೆಟ್ಟಿ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಪ್ರಣವ್‌ ಶ್ರೀ ಪ್ರಸಾದ್‌ ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನದ ಜವಾಬ್ದಾರಿ ಹೊದ್ದಾರೆ. ಚೇತನ್‌ ಡಿಸೋಜ್‌ ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ.

ಅಕ್ಟೋಬರ್‌ 31ರ ದೀಪಾವಳಿ ಹಬ್ಬದ ಪ್ರಯುಕ್ತ ಹೊಂಬಾಳೆ ಫಿಲಂಸ್‌ನ ವಿಜಯ ಕಿರಗಂದೂರು ನಿರ್ಮಾಣ ಮಾಡಿರುವ ಬಘೀರ ಸಿನಿಮಾ ಬಿಡುಗಡೆ ಆಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next