Advertisement

UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್

05:50 PM Oct 17, 2024 | Team Udayavani |

ಲಕ್ನೋ (ಉತ್ತರ ಪ್ರದೇಶ): ಬಹ್ರೈಚ್ ಹಿಂಸಾಚಾರ ಘಟನೆಯ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಉತ್ತರ ಪ್ರದೇಶ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಗುರುವಾರ (ಅಕ್ಟೋಬರ್ 17) ತಿಳಿಸಿದ್ದಾರೆ.

Advertisement

ಬಹ್ರೈಚ್‌ನಲ್ಲಿ ದುರ್ಗಾ ಪೂಜೆ ಮೆರವಣಿಗೆ ವೇಳೆ ಉಂಟಾದ ಹಿಂಸಾಚಾರ ಪ್ರಕರಣದ ಇಬ್ಬರು ಆರೋಪಿಗಳಾದ ಸರ್ಫರಾಜ್ ಮತ್ತು ಮೊಹಮ್ಮದ್ ತಾಲಿಬ್ ಮೇಲೆ ನೇಪಾಳದ ಗಡಿಗೆ ಹತ್ತಿರದಲ್ಲಿರುವ ಬಹ್ರೈಚ್‌ನ ಹಂಡಾ ಬಸೆಹ್ರಿ ಪ್ರದೇಶದಲ್ಲಿ ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಗುಂಡಿಗೆ ಇಬ್ಬರು ಗಾಯಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಒಟ್ಟು 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಹ್ರೈಚ್ ಉನ್ನತ ಪೊಲೀಸ್ ಅಧಿಕಾರಿಯೊಬ್ಬರುಎನ್‌ಕೌಂಟರ್ ನಂತರ ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 13 ರಂದು ದುರ್ಗಾ ಪೂಜೆ ಮೆರವಣಿಗೆ ವೇಳೆ ಹಿಂಸಾಚಾರಕ್ಕೆ ಕಾರಣವಾಗಿ 22 ವರ್ಷದ ರಾಮ್ ಗೋಪಾಲ್ ಮಿಶ್ರಾ ಎಂಬ ಯುವಕನ ಸಾವಿಗೆ ಕಾರಣವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ ಆಕ್ರೋಶ

Advertisement

ಎನ್‌ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಉತ್ತರಪ್ರದೇಶದ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ.ಮೊದಲಿನಿಂದಲೂ ನಕಲಿ ಎನ್‌ಕೌಂಟರ್‌ಗಳನ್ನು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ” ಎಂದು ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಹೇಳಿಕೆ ನೀಡಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ “ಈ ಘಟನೆಯು ಆಡಳಿತಾತ್ಮಕ ವೈಫಲ್ಯವಾಗಿದೆ. ಸರಕಾರವು ವೈಫಲ್ಯವನ್ನು ಮುಚ್ಚಿಕೊಳ್ಳಲು ಎನ್‌ಕೌಂಟರ್‌ಗಳನ್ನು ಮಾಡುತ್ತಿದೆ.ಎನ್‌ಕೌಂಟರ್‌ಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುತ್ತಿದ್ದರೆ, ಯುಪಿ ಹೆಚ್ಚಿನ ರಾಜ್ಯಗಳಿಗಿಂತ ಮುಂದಿರುತ್ತಿತ್ತು. ಒಂದು ವೇಳೆ ಮೆರವಣಿಗೆಗೆ ಅನುಮತಿ ಪಡೆದಿದ್ದರೆ, ಅಂತಹ ಸಣ್ಣ ಕಾರ್ಯಕ್ರಮವನ್ನು ಅವರು ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಾರೆ ಎಂದು ಹೇಗೆ ನಿರೀಕ್ಷಿಸಬಹುದು? ಇಂತಹ ಘಟನೆಗಳು ನಡೆಯಬಾರದು ಮತ್ತು ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಅವರಿಗೆ ನ್ಯಾಯ ಸಿಗುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಘಟನೆಯು ಒಡೆದು ಆಳುವ ನೀತಿ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next