Advertisement

ಭಾರತೀಯ ರೆಸ್ಟೋರೆಂಟ್‌ ವಿರುದ್ಧ ಕ್ರಮಕ್ಕೆ ಆದೇಶ

01:08 AM Mar 28, 2022 | Team Udayavani |

ಮನಾಮ: ಮಧ್ಯಪ್ರಾಚ್ಯ ರಾಷ್ಟ್ರವಾದ ಬಹ್ರೈನ್‌ನಲ್ಲಿರುವ ಭಾರತೀಯ ರೆಸ್ಟೋರೆಂಟೊಂದರಲ್ಲಿ, ಶಾಲು ಧರಿಸಿ ಬಂದಿದ್ದ ಮಹಿಳೆಯೊಬ್ಬರನ್ನು ರೆಸ್ಟೋರೆಂಟ್‌ನೊಳಕ್ಕೆ ಪ್ರವೇಶ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಆ ಹೊಟೇಲನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.

Advertisement

ನೊಂದ ಮಹಿಳೆಯು ತಾನು ಶಾಲು ಧರಿಸಿ ಬಂದಿದ್ದಕ್ಕೆ ತಮ್ಮನ್ನು ಹೊಟೇಲ್‌ನೊಳಗೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಬಹ್ರೈನ್‌ಪ್ರವಾಸೋದ್ಯಮ ಹಾಗೂ ಪ್ರದರ್ಶನ ಆಯೋಗ (ಬಿಟಿಇಎ) ಹೊಟೇಲನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ

ಈ ಹೊಟೇಲ್‌ 1987ರಿಂದ ಬಹ್ರೈನ್‌ನಲ್ಲಿ ಕಾರ್ಯ­ನಿರ್ವಹಿಸುತ್ತಿದೆ ಎಂದು ಮೂಲಗಳು ಹೇಳಿವೆ. ಮತ್ತೊಂದೆಡೆ ಹೊಟೇಲ್‌ನ ಆಡಳಿತ ಮಂಡಳಿ, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ, ಸಾರ್ವಜನಿಕರ ಕ್ಷಮಾಪಣೆ ಕೋರಿದೆ. ಘಟನೆಯ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನ ಮ್ಯಾನೇಜರ್‌ರನ್ನು ಕೆಲಸದಿಂದ ಕಿತ್ತುಹಾಕಿರುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next