Advertisement

ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಸಮಸ್ಯೆ: ಶೀಘ್ರ ಸಭೆ; ಸುನಿಲ್‌ ಕುಮಾರ್‌

01:58 AM Jun 14, 2022 | Team Udayavani |

ಬೈಕಂಪಾಡಿ: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸುವಂತಾಗಲು ಸರಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ದ.ಕ. ಜಿಲ್ಲಾಡಳಿತದ ಜತೆ ಶೀಘ್ರ ಸಭೆ ನಡೆಸಲಾಗುವುದು ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

Advertisement

ಸೋಮವಾರ ಬೈಕಂಪಾಡಿಯ ಕೆನರಾ ಸಣ್ಣ ಕೈಗಾರಿಕಾ ಸಂಘದ ಕಚೇರಿಯಲ್ಲಿ ಸಂಘದ ವತಿಯಿಂದ ನಡೆದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕಾಲಮಿತಿಯೊಳಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳ ಬೇಕಿದೆ. ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಜತೆ ಸಭೆ ಯಲ್ಲಿ ನಿಮ್ಮ ಸಂಘವೂ ಪಾಲ್ಗೊಳ್ಳಬೇಕು ಎಂದು ಆಹ್ವಾನಿಸಿದರು.

ಸೂಕ್ತವಾದ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಕೈಗಾರಿಕ ಪ್ರಾಂಗಣದಲ್ಲಿ ಕೃತಕ ನೆರೆಯಿಂದ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಪ್ರಾಂಗಣಕ್ಕೆ ದಿನ 24 ಗಂಟೆ ನೀರು ಪೂರೈಕೆಗೆ ಯೋಜನೆ ಬೇಕಿದೆ. ಕೈಗಾರಿಕಾ ಪ್ರಾಂಗಣದಲ್ಲಿ ಎಸ್‌ಟಿಪಿ ಘಟಕ ನಿರ್ಮಾಣಕ್ಕೂ ಆದ್ಯತೆ ನೀಡುವಂತೆ ಅಧ್ಯಕ್ಷರು ಮನವಿ ಮಾಡಿದರು.

ಸಂಘದ ಅಧ್ಯಕ್ಷ ಐಸಕ್‌ ವಾಸ್‌, ಉಪಾಧ್ಯಕ್ಷ ಅನಂತೇಶ್‌ aಪ್ರಭು, ಕಾರ್ಯದರ್ಶಿ ಆತ್ಮಿಕ ಅಮೀನ್‌, ಕೋಶಾಧಿಕಾರಿ ಸುರೇಶ್‌ ಕರ್ಕೇರ, ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next