Advertisement
ಶ್ವಾಸ ಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜ್ಞಾನ ಪ್ರಕಾಶ್ ಅವರಿಗೆ ಸುಪ್ರಿಂ ಕೋರ್ಟ್ ಮಾನವೀಯತೆ ಆಧಾರ ಮೇಲೆ ಕಳೆದ ನ. 26 ರಂದು ಜಾಮೀನು ಮಂಜೂರು ಮಾಡಿತ್ತು. ಇದರ ಆಧಾರದ ಮೇಲೆ ಮಂಗಳವಾರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನ ಪ್ರಕಾಶ್ ಕಳೆದ 29 ವರ್ಷಗಳಿಂದ ಬೆಳಗಾವಿ ಹಿಂಡಲಗ ಮತ್ತು ಮೈಸೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಒಂದುವರೆ ವರ್ಷಗಳಿಂದ ಶ್ವಾಸ ಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜ್ಞಾನ ಪ್ರಕಾಶ್‌ಗೆ ಬೆಂಗಳೂರಿನ ಕಿದ್ವಾಯಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಕೀಲರಾದ ವಿಕ್ರಂ ಹಾಗೂ ಭಾರತಿ ಅವರು, ಸುಪ್ರೀಂ ಕೋರ್ಟ್ ನಲ್ಲಿ ಜ್ಞಾನ ಪ್ರಕಾಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೆ ಪುರಸ್ಕರಿಸಿದೆ.
Related Articles
Advertisement