ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಇದರೊಂದಿಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾದಂತಾಗಿದೆ.
ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುಯ್ವ ಆರೋಪದ ಮೇಲೆ ಹೊಳೆನರಸೀಪುರ ಟೌನ್ ಠಾಣಾ ಪ್ರಕರಣ ದಾಖಲಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಒಂದು, ಸಿಐಡಿಯಲ್ಲಿ ಎರಡು ಪ್ರಕರಣ ಸೇರಿದಂತೆ ಒಟ್ಟು ಮೂರೂ ಪ್ರಕರಣಗಳು ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಸದ್ಯ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಶದಲ್ಲಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಹೆಚ್.ಡಿ.ರೇವಣ್ಣ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು