Advertisement

Santro Ravi: 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು

08:58 PM May 09, 2024 | Team Udayavani |

ಮೈಸೂರು: ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ಬಂಧಿತನಾಗಿ 14 ತಿಂಗಳ ಕಾಲ ಜೈಲಿನಲ್ಲಿದ್ದ ರವಿ, ಆರೋಗ್ಯ ಸಮಸ್ಯೆ ನಿಮಿತ್ತ ಜಾಮೀನು ನೀಡಬೇಕು ಎಂದು ಮಾಡಿದ್ದ ಮನವಿಯನ್ನು  ಪುರಸ್ಕರಿಸಿದ ನ್ಯಾಯಾಧೀಶರು, ಜಾಮೀನು ಮಂಜೂರು ಮಾಡಿದ್ದಾರೆ.

ಹಲವು ಪ್ರಕರಣಗಳಲ್ಲಿ ರಾಜ್ಯ ಸರಕಾರಕ್ಕೆ ತಲೆನೋವಾಗಿದ್ದ ಸ್ಯಾಂಟ್ರೋ ರವಿಯನ್ನು ಕಳೆದ ವರ್ಷ ಗುಜರಾತ್‌ನಿಂದ ಬಂಧಿಸಿ ಕರೆತರಲಾಗಿತ್ತು. ಈ ಮೊದಲು ಆರೋಪಿ  ಹೈಕೋರ್ಟ್‌ ಹಾಗೂ ಬಳಿಕ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದರೂ ತಿರಸ್ಕೃತವಾಗಿತ್ತು.

ಸ್ಯಾಂಟ್ರೋ ರವಿ ವಿರುದ್ಧ ಕಳೆದ ವರ್ಷ ಮೈಸೂರಿನಲ್ಲಿ ವೇಶ್ಯಾವಾಟಿಕೆ, ಅತ್ಯಾಚಾರ ಸಹಿತ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿತ್ತು.  ಬಂಧನದ ವೇಳೆ ಆತನಿಂದ ವಶಪಡಿಸಿಕೊಂಡ ಮೊಬೈಲ್‌, ಇತರ ದಾಖಲೆಗಳು ಆರೋಪಿ ಜತೆಗೆ ಸಚಿವರು, ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಸಂಪರ್ಕ ಇರುವುದು ಬಹಿರಂಗಗೊಂಡು ಮುಜುಗರ ಎದುರಿಸುವಂತಾಗಿತ್ತು. ಆಗ ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next