Advertisement

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

04:46 PM Nov 29, 2023 | Team Udayavani |

ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ‌ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Advertisement

ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ ಅಜ್ಜಿ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್ಪಿ ಹಣಮತರಾಯ, ಡಿವೈಎಸ್‌ಪಿ ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್‌ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡದಿಂದ ದಾಳಿ ನಡೆಸಿ ಮಂಜುನಾಥ ಅವರನ್ನು ಬಲೆಗೆ ಬೀಳಿಸಿದೆ.

ಇದನ್ನೂ ಓದಿ: Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Advertisement

Udayavani is now on Telegram. Click here to join our channel and stay updated with the latest news.

Next