Advertisement

ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ : ಬೈರತಿ ಬಸವರಾಜ

06:29 PM Aug 19, 2021 | Team Udayavani |

ಬೆಂಗಳೂರು :  ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ( Comprehensive Development Plan) ತಯಾರಿಸಲು ಆಯುಕ್ತರು ಗಳಿಗೆ ಮಾನ್ಯ ನಗರಾಭಿವೃದ್ಧಿ ಸಚಿವರಾದ  ಬಿ.ಎ.ಬಸವರಾಜ ಅವರು ಸೂಚಿಸಿದ್ದಾರೆ.

Advertisement

ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಸಭೆ ವಿಕಾಸ ಸೌಧದಲ್ಲಿ ಇಂದು(ಆಗಸ್ಟ್ 19) ಮಧ್ಯಾಹ್ನ ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿತು.

ಇದನ್ನೂ ಓದಿ : ಭಾರತದಲ್ಲಿ ಅತೀ ಹೆಚ್ಚು ಕಾಳಿಂಗ ಸರ್ಪವಿರುವುದು ಕರ್ನಾಟಕದ ಇದೇ ಮೃಗಾಲಯದಲ್ಲಿ!!

ಸಭೆಯಲ್ಲಿ ಆಯುಕ್ತರು ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 2021 ಸೆಪ್ಟೆಂಬರ್ 30 ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿ ಯನ್ನು ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು ಎಂದು ಗಡುವು ನೀಡಿದರು.

ಕೆಲ ಪ್ರಾಧಿಕಾರದ ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪ್ರಕರಣಗಳು ಇರುವುದರಿಂದ ಅಂತಹ ಪ್ರಾಧಿಕಾಗಳಿಗೆ ಅಕ್ಟೋಬರ್ ಮತ್ತು ನವೆಂಬರ್ 30 ರೊಳಗೆ ಸಲ್ಲಿಸಲು ಅವಕಾಶ ‌ನೀಡಿದ್ದಾರೆ.

Advertisement

ಕೆಲ ಪ್ರಾಧಿಕಾರದ ಸುಪರ್ದಿಯಲ್ಲಿ ಇರುವ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಹರಾಜು ಪ್ರಕ್ರಿಯೆಯಲ್ಲಿ ಮಾರಾಟ ಮಾಡಲು ಸೂಚಿಸಿದರು. ಇದರಿಂದ ಪ್ರಾಧಿಕಾರಕ್ಕೆ ಆದಾಯ ಬರುತ್ತದೆ ಎಂದರು.

ಅಲ್ಲದೇ ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರು ಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ‌ಎಲ್.ಶಶಿಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಸಪ್ಟೆಂಬರ್ ನಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ  : ಡಾ. ಪ್ರಿಯಾ ಅಬ್ರಾಹಮ್

Advertisement

Udayavani is now on Telegram. Click here to join our channel and stay updated with the latest news.

Next