Advertisement

ಯಾದಗಿರಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು: ಸಚಿವ ಬೈರತಿ ಬಸವರಾಜ್

04:36 PM Jun 23, 2020 | keerthan |

ಯಾದಗಿರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾವು ಹಲವಾರು ಸಮಸ್ಯೆಗಳ ಮಧ್ಯೆ ಜನಪರ ಆಡಳಿತ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

Advertisement

ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿರುವ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಕಾರ್ಯಕರ್ತರು ನಮ್ಮ ಗಮನಕ್ಕೆ ತನ್ನಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ರಾಜುಗೌಡ, ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ. ಶರಣಭೂಪಾಲರೆಡ್ಡಿ, ದೇವೇಂದ್ರನಾಥ ನಾಥ್, ಸಾಯಿಬಣ್ಣ ಬೋರಬಂಡ, ದೇವರಾಜ ನಾಯಕ ಸೇರಿದಂತೆ ಇತರರು ಇದ್ದರು.

ಬಳಿಕ ಜಿ.ಪಂ. ಸಭಾಂಗಣದಲ್ಲಿ ಕೋವಿಡ್-19 ಕುರಿತ ಜಾಗೃತಿ ಕಿರುಚಿತ್ರದ ವಿಡಿಯೋ ಸಿಡಿಯನ್ನು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next