ವಿಧಾನಸಭೆ: ಬಜಪೆ ಪಟ್ಟಣ ಪಂಚಾಯತಿಯಲ್ಲಿ ಸಿಬ್ಬಂದಿ ಕೊರತೆಯಿಂದ ಯಾವುದೇ ಕಾಮಗಾರಿ ನಡೆಸಲಾಗುತ್ತಿಲ್ಲ. ಸಿಬ್ಬಂದಿ ಕೊರತೆ ನೀಡಿಸುವಂತೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದರು
ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ, ಶಾಸಕ ಉಮಾನಾಥ ಕೋಟ್ಯಾನ್, ಮೂಡಬಿದಿರೆ ವಿದ್ಯಾಕಾಶಿ, ಸಾಂಸ್ಕೃತಿಕ ಕೇಂದ್ರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.
ಬಜಪೆ ಪಟ್ಟಣ ಪಂಚಾಯತಿಯಲ್ಲಿ ಯಾವುದೇ ಮೂಲಸೌಕರ್ಯ ಕಲ್ಪಿಸಲಾಗಿಲ್ಲ. ಅಲ್ಲಿ ಕೆಲಸ ಮಾಡಲು ಸಿಬ್ಬಂದಿಗಳ ಕೊರತೆ ಇದೆ. ಒಳ ಚರಂಡಿ ವ್ಯವಸ್ಥೆ ನೋಡಿಕೊಳ್ಳಲು ಒಬ್ಬ ಇಂಜನೀಯರ್ ಇಲ್ಲದಿರುವುದರಿಂದ ನಿಗದಿತ ಸಮಯದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಮೂಡಬಿದಿರೆ ಕ್ಷೇತ್ರದಲ್ಲಿ ಬಜಪೆ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾರ್ಯವೂ ನಡೆಯುತ್ತಿಲ್ಲ ಎಂದು ಹೇಳಿದರು.
ಅವರ ಪ್ರಶ್ನೆಗೆ ಉತ್ತರಿಸಿದ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್, ಬಜಪೆ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ¿åನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಹಂತ 4ರ ಯೋಜನೆ ಅಡಿಯಲ್ಲಿ ಬಜಪೆ ಪಟ್ಟಣ ಪಂಚಾಯತಿಗೆ 5 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ಬೇಕಾದ ನಿವೇಶನ ಗುರುತಿಸಲಾಗಿದ್ದು ಡಿಪಿಆರ್ ತಯಾರಿಸಲಾಗುತ್ತಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಹಾಗೂ ಶೀಘ್ರವೇ ಎಂಜನೀಯರ್‌ರನ್ನು ವರ್ಗಾವಣೆ ಮಾಡಿಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.