ಟೋಕಿಯೊ: ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ ಟೋಕಿಯೋ ಒಲಿಂಪಿಕ್ಸ್ ನ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.
ಇಂದು ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಭಜರಂಗ್ ಪೂನಿಯಾ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದ್ದಾರೆ.
ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ಆಟವಾಡಿದ ಪುನಿಯಾ, ಮೊದಲ ಸುತ್ತಿನಲ್ಲಿ 1-0 ಮುನ್ನಡೆ ಸಾಧಿಸಿದರು. ನಂತರ ಎರಡನೇ ರೌಂಡ್ನಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಭಜರಂಗ್, ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು.
ಇದನ್ನೂ ಓದಿ:ಗ್ರೇಟ್ ಬ್ರಿಟನ್ ವಿರುದ್ಧ ಎಡವಿದ ಭಾರತ ಮಹಿಳಾ ಹಾಕಿ ತಂಡ: ಕಂಚಿನ ಕನಸು ಭಗ್ನ
ಸೆಮಿಫೈನಲ್ನಲ್ಲಿ ಅಜೆರ್ಬೈಜಾನ್ನ ಹಾಜಿ ಅಲಿಯೇವ್ ವಿರುದ್ಧ ಸೆಣಸಾಡಲಿದ್ದಾರೆ.
ಗುರುವಾರ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.