Advertisement

ಬಿಜೆಪಿಗೆ ಸೇರಿದ ದ್ರಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ

03:44 PM Apr 01, 2022 | Team Udayavani |

ಬೀದರ್: ಕರ್ನಾಟಕ ದ್ರಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ ಬಿಜೆಪಿ ಸೇರ್ಪಡೆಯಾದರು.

Advertisement

ಬೆಂಗಳೂರಿನ ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಶಾಲು ಹೊದಿಸಿ ಸನ್ಮಾನಿಸಿ ಕೋಟೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಲಬುರಗಿ ವಿಭಾಗದಲ್ಲಿ ಬಿಜೆಪಿ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದೇನೆ. ಬಿಜೆಪಿಯ ತತ್ವ, ಸಿದ್ಧಾಂತಗಳನ್ನು ಮೆಚ್ಚಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ವಹಿಸಿದರೂ ಪ್ರಾಮಾಣಿಕತೆಯಿಂದ ನಿಭಾಯಿಸುವೆ ಎಂದು ಬಕ್ಕಪ್ಪ ಕೋಟೆ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದಾಗಿ ಇಡೀ ದೇಶದಲ್ಲಿ ಬಿಜೆಪಿಯ ಅಲೆ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರವೂ ಜನ ಮನ್ನಣೆ ಗಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ:ಆರ್ ಡಿಎಕ್ಸ್ ಸ್ಫೋಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಸಂಚು; ಎನ್ಐಎ ತನಿಖೆ

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲ್, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕೋಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಕಾರ್ಯದರ್ಶಿ ಪ್ರಶಾಂತ ಕೋಟೆ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next