Advertisement
ಸರಕಾರದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲ ಮಸೀದಿ ಗಳಲ್ಲಿ ಹಬ್ಬ ಆಚರಿಸಲು ಸಿದ್ಧತೆ ನಡಸಲಾಗಿದೆ. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್, ಈದ್ ಖುತಾº ನೆರವೇರಲಿದೆ.
ಉಡುಪಿ ಜಿಲ್ಲೆಯಲ್ಲಿ ವಕ್ಫ್ ನೋಂದಾಯಿತ 138 ಸೇರಿದಂತೆ ಒಟ್ಟು 180 ಮಸೀದಿಗಳಿದ್ದು, ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ರಷ್ಟು ಮಂದಿ ಯನ್ನು ಸೇರಿಸಿ ಸಾಮೂಹಿಕ ಈದ್ ನಮಾಝ್ ನಡೆಸಲಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಮಸೀದಿಗಳಲ್ಲಿ ಎರಡು ಹಾಗೂ ಮೂರು ಹಂತಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಲಾಗುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಮಸೀದಿ ವಠಾರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.