Advertisement

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

10:18 AM Sep 07, 2022 | Team Udayavani |

ಗೋಕಾಕ್ : ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ.

ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು. ನಿಷ್ಠೂರತನವೂ ಅವರಲ್ಲಿತ್ತು. ಇವರ ಅಕಾಲಿಕ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ರಾಜ್ಯದಲ್ಲಿಯೇ ಅತೀ ಹಿರಿಯ ಶಾಸಕರಾಗಿದ್ದರು. ಅಭಿವೃದ್ಧಿಪರ ಚಿಂತನೆಗಳು ಮನೆ ಮಾತಾಗಿದ್ದವು. ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಸಹಕಾರಿ ಕ್ಷೇತ್ರಕ್ಕೂ ಇವರ ಕೊಡುಗೆ ಅನನ್ಯವಾಗಿದೆ. ಉತ್ತಮ ಗೆಳೆಯ, ಆಪ್ತ ಒಡನಾಡಿಯನ್ನು ಕಳೆದುಕೊಂಡು ದು:ಖಿತನಾಗಿದ್ದೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

ಉಮೇಶ್ ಕತ್ತಿಯವರ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ಅವರ ಕುಟುಂಬ ವರ್ಗಕ್ಕೆ, ಅವರ ಅಭಿಮಾನಿಗಳಿಗೆ ನೀಡಲೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ : ಕೋಟಿ. ರೂ ಬೆಲೆ ಬಾಳುವ ಜಮೀನು ಒತ್ತುವರಿ : ಅಧಿಕಾರಿಗಳಿಂದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next