Advertisement

Belagavi ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

04:53 PM Apr 01, 2024 | Team Udayavani |

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಸೋಮವಾರ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಈ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆಯಿತು.

ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಹಿಂದಿನ ಅಧ್ಯಕ್ಷ ವಿವೇಕರಾವ ಪಾಟೀಲ ಮತ್ತು ಒಕ್ಕೂಟದ ಸದಸ್ಯರು ನನ್ನನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಎಲ್ಲಾ ಸದಸ್ಯರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next