ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು.
ಗೋಕಾಕ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ, ಸಾರ್ವಜನಿಕವಾಗಿ ಕಿತ್ತಾಟ ಬೇಡ ಎಂದು ಮನವಿ ಮಾಡಿದರು.
ರಮೇಶ ಜಾರಕಿಹೊಳಿ ಅವರಿಗೆ ಅನ್ಯಾಯ ಆಗಿರುವುದು ನಿಜ, ಅದಕ್ಕೆ ಹೋರಾಟ ಮಾಡಲಿ. ಸಾರ್ವಜನಿಕವಾಗಿ ಟೀಕೆ ಟಿಪ್ಪಣಿ ಮಾಡುವುದು ಬೇಡ ಎಂದು ಬಾಲಚಂದ್ರ ಮನವಿ ಮಾಡಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್ ಜಾರಕಿಹೊಳಿ ಕಿಡಿ