Advertisement
ಸರಕಾರ ಮತ್ತು ಕೆಎಂಎಫ್ ಮುಂದೆ ಯಾವುದೇ ವಿಲೀನದ ಪ್ರಸ್ತಾವವೇ ಇಲ್ಲ. ಅಂಥ ಪ್ರಸ್ತಾವ ಬಂದದ್ದೇ ಆದರೆ ಮೊದಲು ನಾನೇ ತಿರಸ್ಕಾರ ಮಾಡುತ್ತೇನೆ. ಈ ವಿಲೀನ ಎಂಬ ವಿವಾದದ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಕೆಎಂಎಫ್ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಸುಮಾರು 40ರಿಂದ 50 ಲಕ್ಷ ಮತದಾರರಿದ್ದಾರೆ. ಚುನಾವಣೆ ಸಮಯದಲ್ಲಿ ಅವರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಕೆಲವರು ಈ ರೀತಿಯ ಕುತಂತ್ರ ನಡೆಸಿದ್ದಾರೆ. ಇದಕ್ಕೆ ರಾಜ್ಯದ ಜನರು ಕಿವಿಗೊಡಬಾರದು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದರು.
Related Articles
Advertisement
ವಾರ್ಷಿಕ 22 ಸಾವಿರ ಕೋಟಿ ರೂ. ವಹಿವಾಟುಕೇಂದ್ರ ಸಚಿವ ಅಮಿತ್ ಶಾ ಅವರು ಕೆಎಂಎಫ್ ಬಲವರ್ಧನೆಗಾಗಿ ಅಮುಲ್ ಮಾದರಿಯಂತೆ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಸಲಹೆ ನೀಡಿದ್ದಾರೆ. ಆದರೆ ಇದನ್ನೇ ಕೆಲವರು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಕೆಎಂಎಫ್ ವಾರ್ಷಿಕವಾಗಿ 22,000 ಕೋಟಿ ರೂ.ಗಳ ವಹಿವಾಟು ನಡೆಸಿದ್ದು, ಇದರಿಂದ ಕೆಎಂಎಫ್ ಮತ್ತು 15 ಜಿಲ್ಲಾ ಹಾಲು ಒಕ್ಕೂಟಗಳು ಸೇರಿ ವಾರ್ಷಿಕವಾಗಿ ಅಂದಾಜು 200 ಕೋಟಿ ರೂ.ಗಳ ಲಾಭ ನಿರೀಕ್ಷೆ ಮಾಡಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಬೇಕು. ಅದನ್ನು ಬಿಟ್ಟು ನಂದಿನಿ-ಅಮುಲ್ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.