Advertisement

ಬಾಲಾಕೋಟ್ ದಾಳಿಗೆ ಇಂದಿಗೆ ಒಂದು ವರ್ಷ ಪೂರ್ಣ: ಹೇಗಿತ್ತು ಗೊತ್ತಾ ಅಂದಿನ ಕಾರ್ಯಾಚರಣೆ ?

11:03 AM Feb 27, 2020 | Mithun PG |

ನವದೆಹಲಿ: ಪುಲ್ವಾಮಾದಲ್ಲಿ ಸಿ ಆರ್ ​ಪಿ ಎಫ್ ಯೋಧರ ವಾಹನದ ಮೇಲೆ ಪಾಕ್ ಉಗ್ರ ಸಂಘಟನೆ ಜೈಷ್ ಎ ಮೊಹಮ್ಮದ್ ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರದ ಮೇಲೆ ಭಾರತೀಯ ವಾಯುಪಡೆ ನಡೆಸಿದ ಬಾಲಾಕೋಟ್ ದಾಳಿಗೆ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ.

Advertisement

2019ರ ಫೆಬ್ರವರಿ 14ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಭಾರತೀಯ 40 ಯೋಧರು ಹುತಾತ್ಮರಾಗಿದ್ದರು.  ಸುಮಾರು 12 ದಿನಗಳ ನಂತರ ಐಎಎಫ್ ತನ್ನ ಮಿರಾಜ್ -2000 ಫೈಟರ್ ಜೆಟ್‌ಗಳನ್ನು  ಬಳಸಿಕೊಂಡು ಬಾಲಾಕೋಟ್ ನಲ್ಲಿದ್ದ ಜೈಷ್ ಉಗ್ರರ ತರಭೇತಿ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 300 ಉಗ್ರರನ್ನು ಆ ವೇಳೆ ಧ್ವಂಸ ಮಾಡಲಾಗಿತ್ತು. ಆದರೆ ಪಾಕಿಸ್ತಾನ ಈ ದಾಳಿ ನಡೆದಿರುವುದನ್ನು ಅಲ್ಲಗಳೆದಿತ್ತು. ಮತ್ತು ಬಾಲಾಕೋಟ್ ನಲ್ಲಿ ಯಾರು ಸಾವನ್ನಪ್ಪಿಲ್ಲ ಎಂದು ತಿಳಿಸಿತ್ತು.

ನಂತರದಲ್ಲಿ  ಪಾಕ್ ಕೂಡ ತನ್ನ ಮೂರು ಎಫ್-16 ಯುದ್ಧ ವಿಮಾನಗಳ ಮೂಲಕ ಭಾರತ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್​ನ ವಿಮಾನಗಳು ಭಾರತ ಗಡಿದಾಟಿ ಒಳಗೆ ಬಂದಿದ್ದವು. ತಕ್ಷಣ ಭಾರತದ ಕಡೆಯಿಂದ ಮಿಗ್-21 ವಿಮಾನಗಳು ಪಾಕ್ ವಿಮಾನಗಳನ್ನು ಹಿಮ್ಮೆಟ್ಟಿಸಲು ಮುಗಿಬಿದ್ದವು. ಈ ವೇಳೆ ಮಿಗ್-21 ವಿಮಾನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್, ಪಾಕ್​ನ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅವರ ವಿಮಾನ ಅಪಘಾಕ್ಕೀಡಾಗಿತ್ತು. ನಂತರ ಪಾಕ್ ಸೇನೆ ಅವರನ್ನು ವಶಕ್ಕೆ ಪಡೆದಿತ್ತು. ಭಾರತ ಹಾಗೂ ಜಾಗತಿಕ ಮಟ್ಟದ ಒತ್ತಡಕ್ಕೆ ಮಣಿದ ಪಾಕ್ ಅಭಿನಂದನ್​ರನ್ನು ಭಾರತಕ್ಕೆ ಹಸ್ತಾಂತರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next