ಹೊಸದಿಲ್ಲಿ: ಸುಮಾರು 300ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಬಾಲಸೋರ್ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಭೇಟಿ ನೀಡಲಿದ್ದಾರೆ.
ವರದಿಯ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಕಟಕ್ ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಸಭೆ ಕರೆದಿದ್ದರು. ಇದರಲ್ಲಿ ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ:SLvsAFG: ಶುಬ್ಮನ್ ಗಿಲ್ ದಾಖಲೆ ಮುರಿದ ಅಫ್ಘಾನಿಸ್ತಾನದ ಬ್ಯಾಟರ್
ಲಭ್ಯವಿರುವ ದಾಖಲೆಗಳ ಪ್ರಕಾರ ಭಾರತದಲ್ಲಿ ನಡೆದ ನಾಲ್ಕನೇ ಮಾರಣಾಂತಿಕ ರೈಲು ಅಪಘಾತ ಇದಾಗಿದೆ. ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆಗೆ ಈ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವಾಲಯವು ತನಿಖೆಗೆ ಆದೇಶ ಹೊರಡಿಸಿದೆ.