Advertisement

ಮನೆ ತೆರವುಗೊಳಿಸಿದವರಿಗೆ ಸೌಲಭ್ಯ ಕಲ್ಪಿಸಿ

03:27 PM Jul 24, 2019 | Naveen |

ಬಾಳೆಹೊನ್ನೂರು: ಭದ್ರಾನದಿ ಸೇತುವೆ ಪಕ್ಕದಲ್ಲಿನ ಬಂಡಿಮಠದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದು, ಇದೀಗ ಭದ್ರಾನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಸುಮಾರು 25 ಮನೆಗಳನ್ನು ತೆರವುಗೊಳಿಸಬೇಕಾಗಿದೆ. ಮನೆ ತೆರವುಗೊಳಿಸಿದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

Advertisement

ಸಮೀಪದ ಬನ್ನೂರು ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಬನ್ನೂರು ಗ್ರಾಪಂನ 2019-20ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯಲ್ಲಿ ಮಾತನಾಡಿದರು.

ಜಿಪಂ ಸದಸ್ಯೆ ಚಂದ್ರಮ್ಮ ಮಾತನಾಡಿ, ಗ್ರಾಪಂ ವ್ಯಾಪ್ತಿಯ ವಸತಿ ಮನೆಗಳನ್ನು ಆದಷ್ಟು ಬೇಗ ನಿರ್ಮಿಸಿಕೊಳ್ಳಬೇಕು. ಅಲ್ಲದೆ ಬಾಳೆಹೊನ್ನೂರು ಸಮೀಪದ ಬಂಡಿಮಠ ಹತ್ತಿರದ ಭದ್ರಾ ಸೇತುವೆ ಪಕ್ಕದಲ್ಲಿ ಮಾಸಿಸುವ ಮನೆಯವರು ಮನೆಯನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆ ಹಾಗೂ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಬದಲಿ ವ್ಯವಸ್ಥೆ ಮಾಡಲಾಗುವುದು. ಜಿಪಂ ವತಿಯಿಂದ ಗಂಗಾಕಲ್ಯಾಣ ಯೋಜನೆ, ಮತ್ತು ಮಹಿಳಾ ಸಂಘಕ್ಕೆ ಸ್ವ ಉದ್ಯೋಗ ಕೈಗೊಳ್ಳಲು ಸುಮಾರು 2ರಿಂದ ಮೂರು ಲಕ್ಷ ಸಹಾಯ ಧನವಿದ್ದು ಅದರ ಸದುಪಯೋಗ ಪಡೆಯಬೇಕು ಎಂದರು.

ಗ್ರಾಪಂ ಅಧ್ಯಕ್ಷ ಟಿ.ಎಂ.ವೆಂಕಟೇಶ್‌ ಮಾತನಾಡಿ, ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಸೂಕ್ತ ಕಸ ವಿಲೇವಾರಿ ಪದ್ಧತಿ ಅಳವಡಿಸಿಕೊಂಡು ಸ್ವಚ್ಛ ಪರಿಸರ ಕಾಪಾಡಿಕೊಳ್ಳಬೇಕು. ಕಂದಾಯ ಮತ್ತು ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ ಪಂಚಾಯಿತಿಯ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಜಾತ ಗ್ರಾಮ ಸಭೆಯಲ್ಲಿ 2019-20ನೇ ಸಾಲಿನ ವಿವಿಧ ಯೋಜನೆ ಮತ್ತು ಇಲಾಖೆಗಳ ಫಲಾನುಭವಿಗಳ ಆಯ್ಕೆ, ಸರ್ಕಾರದ ಮಾರ್ಗಸೂಚಿಯಂತೆ ನಿವೇಶನ ಮತ್ತು ಕಟ್ಟಡಗಳ ತೆರಿಗೆಗಳನ್ನು ವೈಜ್ಞಾನಿಕವಾಗಿ ಪರಿಷ್ಕರಿಸುವ ವಿಚಾರ, 2018-19ನೇ ಸಾಲಿನ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

Advertisement

ಶಿಕ್ಷಣ, ಕೃಷಿ, ತೋಟಗಾರಿಕೆ, ಪಶು ವೈದ್ಯ, ಸಾಮಾಜಿಕ ಅರಣ್ಯ, ಆರೋಗ್ಯ ಇಲಾಖೆ, ಅರಣ್ಯ, ಕಂದಾಯ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಪಂ ಉಪಾಧ್ಯಕ್ಷೆ ಕೆ.ಪಿ.ಶ್ಯಾಮಲಾ, ಮಾರ್ಗದರ್ಶಿ ಅಧಿಕಾರಿ ಮಲ್ಲಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎಂ. ಪ್ರಶಾಂತ್‌, ಸದಸ್ಯ ಗೋವಿಂದರಾಜು, ಸರೋಜಮ್ಮ, ಶಶಿಕಲಾ, ಪವಿತ್ರ, ತಾಪಂ ಸದಸ್ಯೆ ಭಾಗ್ಯಲಕ್ಷ್ಮಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next