Advertisement

ಮಲೇರಿಯಾ ವಿರೋಧಿ ಮಾಸಾಚರಣೆ

06:02 PM Jun 18, 2020 | Naveen |

ಬಾಳೆಹೊನ್ನೂರು: ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ, ಡೆಂಘೀ ಜ್ವರ ಹಾಗೂ ಚಿಕನ್‌ ಗುನ್ಯದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದೆಂದು ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಭಗವಾನ್‌ ತಿಳಿಸಿದರು.

Advertisement

ಸಮೀಪದ ಮಾಗುಂಡಿ ಗ್ರಾಪಂ ವ್ಯಾಪ್ತಿಯ ಮಹಲ್ಗೋಡು ಗ್ರಾಮದಲ್ಲಿ ಸರಕಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಗುಂಡಿ ಹಾಗೂ ಬಾಳೆ ಹೊನ್ನೂರು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಮಾಗುಂಡಿ ಗ್ರಾಪಂ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ವಿಶ್ವ ಮಲೇರಿಯ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೇ ಹೋದಲ್ಲಿ ಸೊಳ್ಳೆಯಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾ ದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಸಾರ್ವಜನಿಕರು ಸ್ವಚ್ಚತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಿ.ಕೆ. ಪ್ರಕಾಶ್‌ ಮಾತನಾಡಿ, ತೆಂಗಿನ ಚಿಪ್ಪು, ಪ್ಲಾಸ್ಟಿಕ್‌ ಡಬ್ಬಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡಲು ಕಾರಣವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಬರಬೇಕೆಂದು ತಿಳಿಸಿದರು. ಮಾಗುಂಡಿ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹಿಮ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next