Advertisement
ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಫಾಲ್ಗುಣ ಶು| ತ್ರಯೋದಶಿ ಪವಿತ್ರ ದಿನದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಕಾರ್ಯಕ್ರಮಗಳು ಮಾರ್ಚ್ 5ರಿಂದ ಮಾ.10ರ ಮಂಗಳವಾರದವರೆಗೆ ಜರುಗಲಿದೆ ಎಂದು ಹೇಳಿದರು.
Related Articles
Advertisement
ಮಾ.7ರ ಶನಿವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮಾನಿಹಳ್ಳಿ ಪರುವರ್ಗಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ನುಡಿ ತೋರಣ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಅಥಣಿಯ ರಾಷ್ಟ್ರ ಪ್ರಶಸ್ತಿ ವಿಜೇತ ಮಾಸ್ಟರ್ ಬಸವರಾಜ ಶಂಕರ ಉಮರಾಣಿ ಅವರಿಗೆ 2020ರ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ ಎಂದರು.
ಶಾಮನೂರು ಶಿವಶಂಕರಪ್ಪ ಅವರಿಂದ ರಂಭಾಪುರಿ ಬೆಳಗು ಪತ್ರಿಕೆ ಬಿಡುಗಡೆ, ಮುಖ್ಯ ಅತಿಥಿಗಳಾಗಿ ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವಿಶ್ವನಾಥ ಹಿರೇಮಠ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಎಸ್.ಬಿ. ದಯಾನಂದ ಅವರಿಗೆ ರಂಭಾಪುರಿ ಶ್ರೀಗಳಿಂದ ಗೌರವ ಸನ್ಮಾನ ನಡೆಯಲಿದೆ. ಹಾಸನದ ಗಾನವಿ ವೀರಭದ್ರಪ್ಪನವರಿಂದ ಭರತನಾಟ್ಯ ಮತ್ತು ರಾತ್ರಿ ಗದಗದ ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಸೌರಭ. ನಂತರ ಹೊನ್ನಾಳಿಯ ಕುಳಗಟ್ಟಿ ತಂಡದವರಿಂದ “ಕಣ್ಣೀರಲ್ಲಿ ಕರಗಿದ ಮಾಂಗಲ್ಯ’ ನಾಟಕ ನಡೆಯಲಿದೆ ಎಂದರು.
ಮಾ.8ರ ಭಾನುವಾರ ಶಯನೋತ್ಸವ-ಶ್ರೀ ಜಗದ್ಗುರು ಶಿವಾನಂದ ಎಸ್ಟೇಟಿನಲ್ಲಿ ಪೂಜಾ-ಪ್ರಸಾದ, ಬಸವನಕೋಗು ದೇವಸ್ಥಾನ ಆವರಣದಲ್ಲಿ ಕೆಂಡಾರ್ಚನೆ ಹಾಗೂ ಸಂಜೆ ಶಿವಾದ್ವೈತ ಧರ್ಮ ಪರಿಷತ್ತು ಸಮಾರಂಭದ ನೇತೃತ್ವವನ್ನು ಸೂಡಿ ಜುಕ್ತಿ ಹಿರೇಮಠದ ಡಾ|ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಅಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ನುಡಿ ತೋರಣ, ಮುಖ್ಯ ಅಥಿತಿಗಳಾಗಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ.ಪಾಟೀಲ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಹಿಳಾ ಸಮಾಜದ ಅಧ್ಯಕ್ಷೆ ಗೌರಮ್ಮ ಬಸವೇಗೌಡ, ಕಾμ ಬೆಳೆಗಾರ ಎಚ್ .ಬಿ.ರಾಜಗೋಪಾಲ್ ಪಾಲ್ಗೊàಳ್ಳಲಿದ್ದಾರೆ. ಗುಂಡೇಹಳ್ಳಿ ನಾಗಭೂಷಣ ಜಗದೀಶ ಬಣಕಾರ ಅವರಿಂದ ಯೋಗಾಸನ ಪ್ರದರ್ಶನ ಜರುಗಲಿದೆ.
ಮಾ.9ರ ಸೋಮವಾರ ವಸಂತೋತ್ಸವ ಹಾಗೂ ಸಂಜೆ ಶಿವಾದ್ವೈತ ಧರ್ಮ ಪರಿಷತ್ ಸಮಾರಂಭದ ನೇತೃತ್ವವನ್ನು ಎಸಳೂರು ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಬೆಂಗಳೂರು ವಿಭೂತಿಪುರಮಠದ ಡಾ| ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಂದ ನುಡಿ ತೋರಣ, ಹಲಗೂರು ಬೃಹನ್ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಬೆಳಕಿನ ನುಡಿ, ಮುಖ್ಯ ಅತಿಥಿಗಳಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಶೃಂಗೇರಿ ಮಾಜಿ ಶಾಸಕ ಡಿ.ಎನ್.ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಎಂ.ಎಸ್.ಚೆನ್ನಕೇಶವ ಪಾಲ್ಗೊಳ್ಳಲಿದ್ದಾರೆ.
ಮಾ.10 ಮಂಗಳವಾರ ಭದ್ರಾನದಿ ತೀರದಲ್ಲಿ ಸುರಗಿ ಸಮಾರಾಧನೆಯೊಂದಿಗೆ 2020ರ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ರಾಜ್ಯಾದ್ಯಂತ ವಿವಿಧೆಡೆಯಿಂದ ಸಕಲ ಭಕ್ತರು ಪಾಲ್ಗೊಳ್ಳಬೇಕೆಂದು ತಿಳಿಸಿದರು.