Advertisement
ಬಿ.ಕಣಬೂರು ಗ್ರಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ಫೋರ್ಸ್ ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಹೂವಮ್ಮ, ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಬಿ.ಕೆ. ಮಧುಸೂದನ್, ರವಿಚಂದ್ರ, ಎಂ.ಎಸ್. ಅರುಣೇಶ್, ಗ್ರಾ.ಪಂ ಸದಸ್ಯ ಟಿ.ಎಂ. ಉಮೇಶ್ ರವರು ತಮ್ಮ ಅಭಿಪ್ರಾಯ ತಿಳಿಸಿ ಮಾತನಾಡಿದರು. ಕಳೆದ ಮಾರ್ಚ್ ತಿಂಗಳಿನಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ವ್ಯಾಪಾರಸ್ಥರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಅಲ್ಲದೆ ಜಿಲ್ಲೆಯಾದ್ಯಂತ ಕೊವಿಡ್-19ಸೋಂಕು ಇಲ್ಲದೆ ಹಸಿರು ವಲಯದ ಪಟ್ಟಿಯಲ್ಲಿದೆ. ಯಾವುದೇ ಅನಾಹುತಗಳು ಸಂಭವಿಸಿಲ್ಲ, ಈ ಹಿನ್ನೆಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು ಎಂದರು.
ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಬಿ.ಕಣಬೂರು ಗ್ರಾ.ಪಂ ಅಧ್ಯಕ್ಷೆ ಹೂವಮ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಕೆ.ಎಸ್. ಸೋಮಶೇಖರ್, ನಾಡ ಕಚೇರಿ ಉಪ ತಹಶೀಲ್ದಾರ್ ನಾಗೇಂದ್ರ, ಇಬ್ರಾಹಿಂ ಶಾಫಿ, ಆರ್ಮುಗ ಪಾಲ್ಗೊಂಡಿದ್ದರು.