Advertisement

ಎಲ್ಲರಲ್ಲೂ ಪರಿಸರ ಕಾಳಜಿ ಅಗತ್ಯ

01:16 PM Jun 11, 2020 | Naveen |

ಬಾಳೆಹೊನ್ನೂರು: ಪ್ರತಿಯೊಬ್ಬರಲ್ಲಿ ಪರಿಸರ ಕಾಳಜಿ ಮೂಡಿಸುವ ಕೆಲಸವಾಗಬೇಕು. ಅಲ್ಲದೆ ಗಿಡಗಳನ್ನು ಬೆಳೆಸಿ ಸಂರಕ್ಷಿಸಿ ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

Advertisement

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬಾಳೆಹೊನ್ನೂರು ಅರಣ್ಯ ಇಲಾಖೆ ವತಿಯಿಂದ ವಿವಿಧ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ವರ್ಷ ಪ್ಲಾಸ್ಟಿಕ್‌ ನಿರ್ಮೂಲನೆ ಬಗ್ಗೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು, ಈ ವರ್ಷ ಗಿಡ ಬೆಳೆಸಿ ಜೀವ ವೈವಿಧ್ಯತೆ ಉಳಿಸಲು ಆದ್ಯತೆ ನೀಡಲಾಗಿದೆ. ಗಿಡಗಳನ್ನು ನೆಡುವುದು ಬೆಳೆಸುವುದು ಹಾಗೂ ಅರಣ್ಯ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಬಹಳ ಪ್ರಮುಖವಾಗಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಪರಿಸರ ಬೆಳೆಸುವುದರ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಉಳಿಸಿ ಬೆಳೆಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಹಗಲಿರುಳೆನ್ನದೆ ಕಾರ್ಯನಿರ್ವ ಹಿಸಿದ ವೈದ್ಯರು, ಆರೋಗ್ಯ ಸಹಾಯಕಿಯರು, ಪೊಲೀಸ್‌ ಸಿಬ್ಬಂದಿ, ಗ್ರಾಪಂ, ತಾಪಂ, ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಸಿಬ್ಬಂದಿಯನ್ನು ಅಭಿನಂದಿಸಿದರು. ಅರಣ್ಯ ಇಲಾಖೆಯ ಎ.ಸಿ.ಎಫ್‌. ಸತೀಶ್‌, ಅರಣ್ಯಾಧಿಕಾರಿ ನಿರಂಜನ್‌, ಜಿ.ಪಂ. ಸದಸ್ಯೆ ಚಂದ್ರಮ್ಮ, ತಾ.ಪಂ. ಸದಸ್ಯ ಟಿ.ಎಂ.ನಾಗೇಶ್‌, ಗ್ರಾ.ಪಂ. ಅಧ್ಯಕ್ಷೆ ಹೂವಮ್ಮ, ಉಪಾಧ್ಯಕ್ಷೆ ಫೈರೋಜಾಬಾನು, ಗ್ರಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್‌ ಹನೀಫ್‌, ಎಂ.ಎಸ್‌.ಅರುಣೇಶ್‌, ರವಿಚಂದ್ರ, ಕೇಶವತ್ತಿ ರಾಜೇಶ್‌, ವೈದ್ಯಾಧಿಕಾರಿ ಡಾ| ಎಲ್ದೋಸ್‌, ಡಾ| ಪ್ರವೀಣ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next