Advertisement

ಸತತ ಪ್ರಯತ್ನವೇ ಯಶಸ್ಸಿನ ಗುಟ್ಟು: ಇಒ ಸೂರ್ಯಕಾಂತ

05:01 PM May 06, 2019 | Naveen |

ಭಾಲ್ಕಿ: ವಿದ್ಯಾರ್ಥಿಗಳು ಸತತ ಪ್ರಯತ್ನಪಟ್ಟರೆ ಯಶಸ್ಸು ಸಾಧಿಸಬಹುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಹೇಳಿದರು.

Advertisement

ಪಟ್ಟಣದ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ 2019ನೇ ಸಾಲಿನ ಎಸ್‌ಎಸ್‌ಎಲ್ಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಗುರಿ ಯಾವಾಗಲೂ ಉನ್ನತಮಟ್ಟದ್ದಾಗಿರಬೇಕು. ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ಮಹತ್ತರ ಸಾಧಕರು ನೀವಾಗಬೇಕು. ಮುಂಬರುವ ದಿನಗಳಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳ ಬೇಡಿಕೆಯಂತೆ ಉತ್ತಮ ಪಾಠದ ವ್ಯವಸ್ಥೆ ಮತ್ತು ಕಂಪ್ಯೂಟರ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಇರಬೇಕು. ಇಂದಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿದ್ದು, ನಿಮ್ಮಲ್ಲಿ ಎಲ್ಲರನ್ನೂ ಹಿಂದೆ ಹಾಕಿ ಮುಂದೆ ಬರುತ್ತೇನೆ ಎನ್ನುವ ಛಲವಿರಬೇಕು ಎಂದು ಹೇಳಿದರು.

ಬಸವಕಲ್ಯಾಣ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ ಮಾತನಾಡಿ, ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ವಸತಿ ನಿಲಯಕ್ಕೂ ಮತ್ತು ಹೆತ್ತ ತಂದೆ ತಾಯಿಗಳಿಗೂ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಹೇಳಿದರು.

Advertisement

ಹುಮನಾಬಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಸಂಗಣ್ಣನವರು ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ಸಿಗುವ ಪ್ರೋತ್ಸಾಹಧನ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಔರಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುಭಾಷ ನಾಗೂರೆ ಎಸ್‌ಎಸ್‌ಎಲ್ಸಿ ನಂತರ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗಕ್ಕಾಗಿ ಮೆಟ್ರಿಕ್‌ ನಂತರದ ವಸತಿ ನಿಲಯಗಳ ಬಗ್ಗೆ ಮಾಹಿತಿ ಒದಗಿಸಿದರು. ಅಧ್ಯಕ್ಷತೆ ವಹಿಸಿದ್ದ ಭಾಲ್ಕಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಿಂಗರಾಜ ಅರಸ್‌ ಮಾತನಾಡಿ, ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಹೇಳಿದರು. ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ನಿಲಯದ ವಿದ್ಯಾರ್ಥಿಗಳಾದ ಕಾವ್ಯ ಶಿವರಾಜ, ರಾಣಿ ರಾಚಪ್ಪ್ಪ, ಮಲ್ಲಿಕಾರ್ಜುನ ಪ್ರಭು, ರಾಹುಲ ರಾಜಕುಮಾರ, ವಿಶಾಲ ಗಣಪತಿ, ವಿದ್ಯಾಧರ ನಾಗನಾಥ, ಅಜಯ ಗೋವಿಂದ, ಭೀಮಗೊಂಡ ಶಿವಕುಮಾರ, ಪ್ರದೀಪ ಮಾರುತಿ ಅವರನ್ನು ಸನ್ಮಾನಿಸಲಾಯಿತು. ಐಶ್ವರ್ಯಾ ಪ್ರಾರ್ಥನಾಗೀತೆ ಹಾಡಿದಳು. ವಸತಿ ನಿಲಯದ ಮೇಲ್ವಿಚಾರಕ ಧನರಾಜ ಮೇತ್ರೆ ನಿರೂಪಿಸಿದರು. ದೇಸುರಾವ ರಾಠೊಡ ವಂದಿಸಿದರು

Advertisement

Udayavani is now on Telegram. Click here to join our channel and stay updated with the latest news.

Next