Advertisement

ಕೊರೊನಾ ಕರ್ಫ್ಯೂ ಜಾರಿ

06:34 PM Apr 19, 2021 | Team Udayavani |

ಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ. 19ರಿಂದ ಏ.30ರವರೆಗೆ “ಕೊರೊನಾ ಕರ್ಫ್ಯೂ’ ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿ ಅವರು ಭಾನುವಾರ ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ. 19ರಿಂದ ಏ. 30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.

Advertisement

ಈ “ಕೊರೊನಾ ಕರ್ಫ್ಯೂ’ ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು ಉಳಿದಂತೆ ಎಲ್ಲ ಸೇವೆಗಳನ್ನು/ ಸಂಚಾರಗಳನ್ನು ನಿಷೇ ಧಿಸಿಲಾಗಿದೆ ಎಂದು ಜಿಲ್ಲಾಧಿ ಕಾರಿ ಮಾಲಪಾಟಿ ಅವರು ತಿಳಿಸಿದ್ದಾರೆ. ವಿವಿಧ ಆರೋಗ್ಯ ಸಂಬಂಧಿ ತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂಥ ಎಲ್ಲ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಆದರೆ, ಸಂಬಂ ಸಿದ ಕಾರ್ಮಿಕರು/ ನೌಕರರು, “ಕೊರೊನಾ ಕರ್ಫ್ಯೂ’ ಅವ ಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು. ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿಬಂìಧಿ  ಸಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ವಾಹನಗಳು/ ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು, ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್‌ ಇತ್ಯಾ ದಿಗಳ ಮೂಲಕ ಸಂಚರಿಸಲು ಅನುಮತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂಥವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005 ಸೆಕ್ಷನ್‌ 51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಗತ್ಯ ಕ್ರಮ: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ -19 ನಿಯಂತ್ರಣಕ್ಕೆ ಸಂಬಂ ಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲ ಅವಶ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ತಿಳಿಸಿದ್ದಾರೆ.

Advertisement

ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್‌ -19 ಹರಡುವಿಕೆ ಬಗ್ಗೆ ಪರಿಶೀಲಿಸಲಾಗಿ ಕಳೆದ 15 ದಿನಗಳಲ್ಲಿ ಕೋವಿಡ್‌-19 ಸೋಂಕಿತ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವ ಕಾರಣ ಹಾಗೂ ವೈದ್ಯಕೀಯ ಪರಿಣಿತರ ಸಲಹೆಗಳಂತೆ ಮುಂಬರುವ ದಿನಗಳಲ್ಲಿ ಪ್ರಕರಣಗಳು ಇನ್ನು ಹೆಚ್ಚಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ವೈರಾಣು ಹೆಚ್ಚಾಗಿ ಹರಡದಂತೆ ನಿಯಂತ್ರಿಸಲು ಮತ್ತು ತಡೆಗಟ್ಟಲು ಅವಶ್ಯವವಿರುವುದರಿಂದ ಪ್ರಸ್ತುತ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಿಗದಿ ತ ಸಮಯದಲ್ಲಿ ಜನ ಸಂಚಾರವನ್ನು ನಿಷೇ ಧಿಸುವುದು ಸೂಕ್ತವೆಂದು ಕಂಡುಬಂದಿರುವುದರಿಂದ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next