Advertisement
ಸಂಪುಟ ಸಭೆಯ ಆರಂಭದಲ್ಲೇ ಈ ವಿಷಯ ಪ್ರಸ್ತಾವವಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ಅವರು ಈವರೆಗಿನ ಬೆಳವಣಿಗೆಗಳ ಬಗ್ಗೆ ಸಂಪುಟ ಸಭೆಗೆ ಮಾಹಿತಿ ನೀಡಿದರು.
ಸಂಪುಟ ಸಭೆಯ ಅನಂತರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಔಷಧ ಸರಬರಾಜು ನಿಗಮ (ಕೆಎಸ್‌ಎಂಸಿಎಲ್)ಕ್ಕೆ ಕಾಯಕಲ್ಪ ನೀಡುವತ್ತ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಹೇಳಿದರು. ಔಷಧ ಸರಬರಾಜು ನಿಗಮಕ್ಕೂ ಕಾಯಕಲ್ಪ ನೀಡುವ ಅಗತ್ಯ ಇದೆ. ನಿಗಮದ ಟೆಂಡರ್‌ಗಳಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪೆನಿಗಳೂ ಪಾಲ್ಗೊಳ್ಳುವಂತಾಗಬೇಕು. ಇನ್ನಷ್ಟು ಪರಿಣಕಾರಿಯಾಗಿ ಔಷಧ ಗುಣಮಟ್ಟ ಹಾಗೂ ಉತ್ಪಾದನೆ ಕುರಿತಂತೆ ಪರಿಶೀಲನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಟೆಂಡರ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಸೂಚಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಿಗಮ ಉತ್ತಮವಾಗಿ ಕಾರ್ಯನಿರ್ವಹಿಸುವತ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
Related Articles
Advertisement
ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣ ಸರಬರಾಜು ಮಾಡಿದ ಸಂಸ್ಥೆ ವಿರುದ್ಧ ಕ್ರಮ ಆಗುತ್ತಿದೆ. ಫಾರ್ಮಾಸುÂಟಿಕಲ್ ಕಂಪೆನಿಗಳ ವಿರುದ್ಧ ಕ್ರಮ ಜರಗಿಸುವಲ್ಲಿ ನಮ್ಮ ಕಾನೂನುಗಳು ವಿಫಲವಾಗಿವೆ. ನನ್ನ ರಾಜೀನಾಮೆಯಿಂದ ಎಲ್ಲ ಸರಿ ಆಗುವುದಾದರೆ ಅದಕ್ಕೂ ನಾನು ಸಿದ್ಧ.- ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಲೋಕಾಯುಕ್ತರಿಗೆ ಬಿಜೆಪಿ ದೂರುಬಳ್ಳಾರಿ ಹಾಗೂ ರಾಜ್ಯದ ವಿವಿಧ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯ ಬಿಜೆಪಿ ನಿಯೋಗವು ಶುಕ್ರವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಬಿಜೆಪಿ ಬೆಂಗಳೂರು ದಕ್ಷಿಣ ಜಿÇÉಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ| ನಾರಾಯಣ್, ಸಹ ಸಂಚಾಲಕ ಡಾ| ಎಂ.ಎಸ್. ಸದಾನಂದ, ರಾಜ್ಯ ಸಮಿತಿ ಸದಸ್ಯ ಡಾ| ಲಕ್ಷ್ಮಣ್, ಡಾ| ಸಾಯಿ ಆದರ್ಶ್ ಅವರ ನಿಯೋಗವು ಈ ಮನವಿ ಸಲ್ಲಿಸಿದೆ. ಬಾಣಂತಿಯರ ಸಾವು, ಶಿಶುಗಳ ದುರ್ಮರಣದ ಕುರಿತು ಗಮನ ಸೆಳೆಯಿತಲ್ಲದೆ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿತು. ದುರ್ಘಟನೆಯ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕಿದೆ ಎಂದು ನಿಯೋಗವು ಮನವಿಯಲ್ಲಿ ಕೋರಿದೆ. ನ್ಯಾಯಾಂಗ ತನಿಖೆ ಆಗಬೇಕು
ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯ ಕಾಂಗ್ರೆಸ್ ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ದುರ್ಘಟನೆ ಸಂಬಂಧ ಸೂಕ್ತ ನ್ಯಾಯಾಂಗ ತನಿಖೆ ಮಾಡಿಸಬೇಕು ಹಾಗೂ ಮೃತ ಗರ್ಭಿಣಿಯರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಕಪ್ಪು ಪಟ್ಟಿಗೆ ಸೇರಿದ್ದ ಕಂಪೆನಿಯಿಂದ ಇವರು ಐವಿ ಗುÉಕೋಸ್ ಖರೀದಿಸಿದ್ದರು. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಟೀಕಿಸಿದರು. ಜಮೀರ್‌ಅಹ್ಮದ್ ಉಸ್ತುವಾರಿ ಸಚಿವರು, ಅವರಿಗೂ ಇದಕ್ಕೂ ಸಂಬಂಧವೇ ಇಲ್ಲ. ಅವರು ವಕ#… ವಿಚಾರದಲ್ಲಿ ವ್ಯಸ್ತರಾಗಿದ್ದಾರೆ. ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ. ಕಪ್ಪು ಪಟ್ಟಿಗೆ ಸೇರಿದ್ದ ಕಂಪೆನಿಯಿಂದ ಖರೀದಿ ನಡೆದಿರುವುದರಿಂದ ರಾಜ್ಯ ಸರಕಾರವೇ ಈ ದುರ್ಘಟನೆಗೆ ಹೊಣೆ ಹೊರಬೇಕೆಂದರು. ಬಾಣಂತಿಯರ ಜೀವ ಉಳಿಸದೆ ಸಮಾವೇಶ ಏಕೆ?
ಬಿಮ್ಸ್‌ನಲ್ಲಿ ಒಂದೇ ತಿಂಗಳಲ್ಲಿ ಐವರು ಬಾಣಂತಿಯರ ಸಾವು ಸಂಭವಿಸಿವೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡª ದೊಡ್ಡ ಸಮಾವೇಶ ಮಾಡುತ್ತಿದ್ದಾರೆ. ಮಕ್ಕಳು, ಬಾಣಂತಿಯರ ಜೀವ ಉಳಿಸದೆ ಎಷ್ಟು ಸಮಾವೇಶ ಮಾಡಿದರೆ ಏನು ಪ್ರಯೋಜನ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು. ಸುದ್ದಿಗಾರರ ಜತೆ ಮಾತನಾಡಿ, ಇಷ್ಟು ದೊಡ್ಡ ದುರಂತ ಸಂಭವಿಸಿದರೂ ಆಸ್ಪತ್ರೆಗೆ ಬರಲು ಅವರ ಸಚಿವರಿಗೆ ಪುರುಸೊತ್ತು ಇಲ್ಲ. ಉಸ್ತುವಾರಿ ಸಚಿವ ಜಮೀರ್ ಸಹ ಬಂದಿಲ್ಲ. ಸತ್ತಿರುವ ಬಾಣಂತಿಯರ ಪರ ರಾಜ್ಯ ಸರಕಾರ ನಿಲ್ಲುತ್ತಿಲ್ಲ ಎಂದರು. ಶಾಪ, ಪಾಪದಿಂದಲೇ ಸರಕಾರ ನಾಶ
ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ ಸರಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ. ಶಾಪ ಮತ್ತು ಪಾಪದಿಂದಲೇ ಈ ಸರಕಾರ ನಾಶವಾಗಲಿದೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ ಆಕ್ರೋಶ ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಪಡಿಸಿದರು. ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ಅನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು ತಿಂಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು. ಸಿಎಂ ಸಭೆ ಮಾಡಿದ ಅನಂತ ರವೂ ತಾಯಂದಿರು ಸಾಯುತ್ತಿದ್ದಾರೆ ಎಂದರೆ ಮುಖ್ಯಮಂತ್ರಿಗೆ ಸರ ಕಾರದಲ್ಲಿ ಹಿಡಿತವಿಲ್ಲ, ಇವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ನಾಯಕರು ಜನರ ಹಿತ ಅವಗಣಿಸಿ ವಿಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಬಳ್ಳಾರಿ ಜಿಲ್ಲಾಸ್ಪತ್ರೆಯ ನಾಲ್ವರು ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಣಂತಿ ಗುರುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನ. 10ರಂದು ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಮೂಲಕ ಹೆರಿಗೆಯಾಗಿದ್ದ 7 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿ ಇಬ್ಬರು ಜಿಲ್ಲಾಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಉಳಿದ ಏಳು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಬಿಮ್ಸ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಉಳಿದ ಮೂವರಲ್ಲಿ ಕೂಡ್ಲಿಗಿ ಮೂಲದ ಸುಮಯ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಈಚೆಗೆ ಚೇತರಿಸಿಕೊಂಡಿದ್ದಾರೆ ಎನ್ನಲಾಗಿತ್ತಾದರೂ ಗುರುವಾರ ಅಸುನೀಗಿದ್ದಾರೆ.