Advertisement

Ballari; ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಕಾರ್ಯಕ್ರಮ

11:13 AM Oct 02, 2023 | Team Udayavani |

ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಗಾಂಧಿಯವರ 154ನೇ ಜಯಂತಿ ಹಿನ್ನೆಲೆಯಲ್ಲಿ ನಗರದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ನೇತೃತ್ವದಲ್ಲಿ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.

Advertisement

ಗಾಂಧೀಜಿಯವರ ಕನಸಿನಂತೆ ಸ್ವಚ್ಛತೆಗೆ ಆದ್ಯತೆ ನೀಡಿ ಬಳ್ಳಾರಿ ನಗರವನ್ನು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡುವ ಸಂಕಲ್ಪವನ್ನು ಕೈಗೊಳ್ಳಲಾಗಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ, ಸಚಿವ ನಾಗೇಂದ್ರ ತಿಳಿಸಿದರು.

ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಪಾಲಿಕೆಯ ಮಹಾ ಪೌರರಾದ ತ್ರಿವೇಣಿ, ಉಪ ಮಹಾ ಪೌರರಾದ ಶ್ರೀಮತಿ ಜಾನಕಿಯವರು,‌ ಸದಸ್ಯರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಇತರರು‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next