Advertisement

ಉತ್ತಮ ಫಲಿತಾಂಶಕ್ಕೆ ಸಹಕರಿಸಿ

05:37 PM Feb 08, 2021 | Team Udayavani |

ಬಳ್ಳಾರಿ: ಜಿಲ್ಲೆಯ ಫಲಿತಾಂಶದ ಸುಧಾರಣೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಈ ಬಾರಿಯ ಎಸ್ಸೆಸ್ಸೆಲ್ಸಿಯ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಅತ್ಯುತ್ತಮ ಸ್ಥಾನಕ್ಕೇರಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಜಿಪಂ ಸಿಇಒ ಕೆ.ಆರ್‌.ನಂದಿನಿ ಹೇಳಿದರು.

Advertisement

ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿ  ಸಿದಂತೆ ಶನಿವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೂ 100 ದಿನಗಳು ಉಳಿದಿವೆ. ಈ ಅವಧಿ ಯನ್ನು ಸಮರ್ಪಕವಾಗಿ ಬಳಸಿಕೊಂಡು  ಫಲಿತಾಂಶ ಸುಧಾರಣೆಗಾಗಿ ಶಾಲಾವಾರು ಮತ್ತು ತಾಲೂಕುವಾರು ಹಾಗೂ ಜಿಲ್ಲಾವಾರು
ಕ್ರಿಯಾಯೋಜನೆಯನ್ನು ತಯಾರಿಸಬೇಕು. ಅದರಂತೆ ಕ್ರಮವಹಿಸುವುದರ ಮೂಲಕ ಜಿಲ್ಲೆಯ ಫಲಿತಾಂಶ ಅತ್ಯುತ್ತಮ ಸ್ಥಾನಕ್ಕೇರಲು ಶ್ರಮಿಸಬೇಕು ಎಂದರು.

“ಬಳ್ಳಾರಿ ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯ ಹಣೆಬರಹವನ್ನು ಬದಲಾಯಿಸುವ ಶಕ್ತಿ ಜಿಲ್ಲೆಯಶಿಕ್ಷಕರಿಗೆ ಇದೆ’ ಎಂಬ ಘೋಷವಾಕ್ಯದ ಮೂಲಕ
ಜಿಲ್ಲೆಯ ಫಲಿತಾಂಶವನ್ನು ರಾಜ್ಯದಲ್ಲಿ ಅತ್ಯುತ್ತಮ ಸ್ಥಾನಕ್ಕೇರಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಎಲ್ಲ ಅಧಿ ಕಾರಿಗಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಚೇರಿಯ ಸಹ ನಿರ್ದೇಶಕ(ಪರೀಕ್ಷೆಗಳು) ಅಮಿತಾ ಯರಗೋಳಕರ್‌ ಅವರು ಸಭೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ಜಿಲ್ಲೆಗೆ ಸಂದರ್ಶನ ನೀಡಿ ಫಲಿತಾಂಶ ಸುಧಾರಣೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಮರ್ಪಕ ಮಾರ್ಗದರ್ಶನವನ್ನು ನೀಡುತ್ತಿರುವುದಾಗಿ ಹಾಗೂ ಶಾಲೆಗಳಿಗೆ ಸಂದರ್ಶನ ನೀಡಿ ಕಲಿಕೆ ಗುಣಮಟ್ಟ ಪರಿಶೀಲಿಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲಾಗುತ್ತಿದೆ ಎಂದವರು ವಿವರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಪ್ಪ ಮಾತನಾಡಿ, ಬಳ್ಳಾರಿ ಜಿಪಂ ಸಿಇಒ ಕೆ.ಆರ್‌. ನಂದಿನಿ ಅವರ ಸೂಚನೆ ಮೇರೆಗೆ ಫಲಿತಾಂಶಸುಧಾರಣೆಗೆ 100 ದಿನಗಳಲ್ಲಿ ವಿಷಯವಾರು ಶಿಕ್ಷಕರು, ಮುಖ್ಯ ಗುರುಗಳು, ಅ ಧಿಕಾರಿಗಳು ಕೈಗೊಳ್ಳಬಹುದಾದ ಅಗತ್ಯ ಕಾರ್ಯಗಳ ಕುರಿತು ಕ್ರಿಯಾಯೋಜನೆ ಸಿದ್ಧಪಡಿಸಿ ಫೆ. 10ರೊಳಗೆ ಸಲ್ಲಿಸಲು ತಿಳಿಸಿದರು.

Advertisement

ಡಯಟ್‌ ಉಪನಿರ್ದೇಶಕ (ಅಭಿವೃದ್ಧಿ) ಅವರು ಫಲಿತಾಂಶ ಸುಧಾರಣೆಗೆ ಪೂರಕವಾಗಿ ತರಬೇತಿ ಕಾರ್ಯಗಳನ್ನು ನಡೆಸುತ್ತಿರುವುದಾಗಿ
ಮತ್ತು ಶಾಲೆಗಳಿಗೆ ಸಂದರ್ಶನ ನೀಡಿ ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಅಕ್ಷರ ದಾಸೋಹ ಅ ಧಿಕಾರಿಗಳು, ಬಿಆರ್‌ಸಿಗಳು, ಎಸ್‌ ಎಸ್‌ಎಲ್‌ಸಿ ನೋಡಲ್‌ ಅಧಿ ಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಅನುದಾನಿತ ಮುಖ್ಯಶಿಕ್ಷಕರುಗಳು ಭಾಗವಹಿಸಿದ್ದರು.

ಓದಿ: ಸುಕೋ ಬ್ಯಾಂಕ್‌ ವಿಶೇಷ ಸಾಲ ಯೋಜನೆಗೆ ಇಂದು ಚಾಲನೆ: ಮಸ್ಕಿ

Advertisement

Udayavani is now on Telegram. Click here to join our channel and stay updated with the latest news.

Next