Advertisement

ನಾಳೆ ರಾಜ್ಯಮಟ್ಟದ ಸಮಾವೇಶ: ತಳವಾರ್‌

04:33 PM Feb 19, 2021 | Team Udayavani |

ಬಳ್ಳಾರಿ: ನಗರದ ರಾಘವಕಲಾ ಮಂದಿರದಲ್ಲಿ ಫೆ. 20ರಂದು ಬೆಳಗ್ಗೆ 11 ಗಂಟೆಗೆ ಮಹಾತ್ಮ ಜ್ಯೋತಿಬಾ ಪುಲೆಯವರ ಜಯಂತಿ ನಿಮಿತ್ತ ಸಂವಿಧಾನ ಉಳಿಸಿ ದೇಶ ಉಳಿಸಿ ಎಂಬ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ರಾಜು ಎಂ.ತಳವಾರ್‌ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿನ ತಳಸಮುದಾಯದ ಜನರು,
ಯುವಕರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಒಗ್ಗೂಡಿಸುವ ಸಲುವಾಗಿ ರಾಜ್ಯಾದ್ಯಂತ 12 ಕಡೆ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುತ್ತಿದೆ.

ಈಗಾಗಲೇ ಜನವರಿ 26ರಂದು ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೊದಲ ಸಮಾವೇಶವನ್ನು ಆಯೋಜಿಸಲಾಗಿದ್ದು, ಎರಡನೇ ಸಮಾವೇಶವನ್ನು ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜನರು ಭಾಗವಹಿಸಲಿದ್ದು, ರಾಜ್ಯಾದ್ಯಂತ ಇರುವ ಸಂಘಟನೆಯ ಕಾರ್ಯಕರ್ತರು, ಪದಾ ಧಿಕಾರಿಗಳು, ಅಭಿಮಾನಿಗಳು ಆಗಮಿಸಲಿದ್ದಾರೆ. ಮುಂದಿನ ಮಾರ್ಚ್‌ 20ಕ್ಕೆ ಕೊಪ್ಪಳ, ಮೇ 1ಕ್ಕೆ ಕೋಲಾರ, ಮೇ 20ಕ್ಕೆ ರಾಯಚೂರು ಜಿಲ್ಲೆಗಳಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತದೆ
ಎಂದವರು ವಿವರಿಸಿದರು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಶಿವಕುಮಾರ್‌ ಗಂಗಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ತಳ ಸಮುದಾಯದ ಜನರಿಗೆ ಈವರೆಗೂ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆಯಿದೆ. ಈ ನಿಟ್ಟಿನಲ್ಲಿ ತಳಸಮುದಾಯದ ಯುವಕರು, ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಪೂರಕವಾಗಿ ಸಮಾವೇಶದಲ್ಲಿ ದಲಿತ ಸಮುದಾಯದ ಅಭಿವೃದ್ಧಿ ಕುರಿತ ಚರ್ಚೆ ಮತ್ತು ಸರ್ಕಾರಗಳನ್ನು
ಎಚ್ಚರಿಸುವ ಕೆಲಸ ಆಗಲಿದೆ. ಈ ನಿಟ್ಟಿನಲ್ಲಿ ರಾಜ್ಯ 30 ಜಿಲ್ಲೆಗಳಲ್ಲೂ ನಮ್ಮ ಸಂಘಟನೆ ಸಕ್ರಿಯವಾಗಿದೆ ಎಂದವರು ಮಾಹಿತಿ ನೀಡಿದರು.

ನಗರದ ರಾಘವಕಲಾ ಮಂದಿರದಲ್ಲಿ ಫೆ. 20ರಂದು ನಡೆಯಲಿರುವ ರಾಜ್ಯಮಟ್ಟದ 2ನೇ ಸಮಾವೇಶವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಮಾತಾ ಮಂಜಮ್ಮ ಜೋಗತಿ ಉದ್ಘಾಟಿಸುವರು. ಸಂಘಟನೆಯ ರಾಜ್ಯಾಧ್ಯಕ್ಷ ಡಾ| ಆರ್‌.ಮೋಹನ್‌ರಾಜ್‌ ಅಧ್ಯಕ್ಷತೆ ವಹಿಸುವರು. ಸಮಾವೇಶಕ್ಕೂ ಮುನ್ನ ನಗರದ ರೈಲು ನಿಲ್ದಾಣದ ಮುಂಭಾಗದಿಂದ ರಾಘವಕಲಾ ಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸಮಾವೇಶಕ್ಕೆ ರಾಜ್ಯದಾದ್ಯಂತ ಆಹ್ವಾನಿತ ಗಣ್ಯರು, ರಾಜ್ಯ ಸಮಿತಿ, ಜಿಲ್ಲಾ ಸಮಿತಿ, ತಾಲೂಕು ಸಮಿತಿಗಳ ಪದಾಧಿ ಕಾರಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಸಮಿತಿಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಸೋಮಪ್ಪ ಛಲವಾದಿ, ಜಿಲ್ಲಾ ಸಂಚಾಲಕ ಬೈಲೂರು
ಮಲ್ಲಿಕಾರ್ಜುನ, ಎಸ್‌.ಎಂ. ಶ್ರೀನಿವಾಸ್‌, ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಸುನಿತಾ ಇತರರಿದ್ದರು.

ಓದಿ : ಸರ್ಕಾರಿ  ಶಾಲೆಗಳಲ್ಲಿ ಮೂಲಸೌಕರ್ಯ: ಸಮಗ್ರ ವರದಿ ಕೇಳಿದ ಹೈಕೋರ್ಟ್‌

 

Advertisement

Udayavani is now on Telegram. Click here to join our channel and stay updated with the latest news.

Next