Advertisement
ನಗರದ ಸೆಂಟಿನರಿ ಹಾಲ್‌ನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ನಡೆದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಸಮಾರೋಪದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ಸಹಕಾರದಿಂದ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವು ಯಶಸ್ವಿಯಾಗಿದೆ. ಜಿಲ್ಲೆಯಾದ್ಯಂತ ಸಂಚಾರಿ ಪೊಲೀಸರಿಂದ ಜನಕ್ಕೆ ಸಂಚಾರಿ ನಿಯಮದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಿದೆ. ಸಂಚಾರಿ ಪೊಲೀಸರು ಸಿಗ್ನಲ್ ಸರಿಯಾದ ರೀತಿಯಲ್ಲಿ ಫಾಲೋ ಮಾಡಿ, ತಪ್ಪದೇ ಯೂನಿಫಾರ್ಮ ಧರಿಸಿ, ಆಟೋ ಚಾಲಕರು ವೇಗವನ್ನು ಮೀರಿ ಆಟೋ ಚಲಾಯಿಸಬಾರದು ಎಂದು ಸೂಚಿಸಿದರು.
ಬೈಕ್ ಜಾಥಾ ಮೂಲಕ ಹೆಲ್ಮೆಟ್ ಕಡ್ಡಾಯವಾಗಿ ಬಳಸುವಂತೆ ಅರಿವು ಮೂಡಿಸಲಾಗಿದೆ. ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂಥ ಘಟನೆಗಳನ್ನು ತಡೆಯುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ಜಾಗೃತಿ ಮೂಡಿಸುವ ಕಾರ್ಯ ಇಲ್ಲಿಗೆ ನಿಲ್ಲದೆ ನಿರಂತರವಾಗಿ ಸಾಗುತ್ತದೆ ಎಂದರು. ಸಂಚಾರಿ ಠಾಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿ ಕಾರಿ ಮತ್ತು ಸಿಬ್ಬಂದಿಗೆ ನೆನಪಿನ ಕಾಣಿಕೆಕೆ ನೀಡಲಾಯಿತು. ಈ
ಸಂದರ್ಭದಲ್ಲಿ ಡಿಸಿಆರ್‌ಬಿ ಡಿವೈಎಸ್ಪಿ ಮಹೇಶ್ವರ ಗೌಡ, ಮಹಿಳಾ ಠಾಣೆಯ ಸಿಪಿಐ ವಾಸುಕುಮಾರ್, ಕೌಲ್‌ಬಜಾರ್ ಠಾಣೆ ಸಿಪಿಐ ಸುಭಾಷ್‌ಚಂದ್ರ, ಆಟೋ ಸಂಘದ ಅಧ್ಯಕ್ಷ ತಾಯಪ್ಪ, ಆಟೋ ಚಾಲಕರು, ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಇತರರು ಇದ್ದರು.
Related Articles
Advertisement