Advertisement

ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಿ

04:21 PM Jan 26, 2021 | |

ಬಳ್ಳಾರಿ: ನಮ್ಮ ದೇಶದ ಪ್ರಗತಿ ಹೆಚ್ಚಾಗಿ ಯುವಕರನ್ನು ಅವಲಂಬಿಸಿದೆ. ಇಂದಿನ ಯುವ ಜನರೇ ದೇಶದ ಆಸ್ತಿ, ನಮ್ಮ ರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿದ್ದಾರೆ. ನೀವು ರಾಷ್ಟ್ರದ ಬೆಳವಣಿಗೆ ಬಗ್ಗೆ ಯೋಚಿಸುವ ಮೂಲಕ ಪ್ರಪಂಚಕ್ಕೆ ಮಾದರಿಯಾಗುವಂತಹ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣ ಮಾಡಲು ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ ಎಸ್‌.ಎಚ್‌. ಪುಷ್ಪಾಂಜಲಿದೇವಿ ಹೇಳಿದರು.

Advertisement

ನಗರದ ಬಿಡಿಎಎ ಫುಟ್ಬಾಲ್‌ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶದ ಪ್ರಗತಿ ಹೆಚ್ಚಾಗಿ ಯುವಕರನ್ನು ಅವಲಂಬಿಸಿದೆ. ಆದರೆ ಇಂದಿನ ಯುವ ಜನತೆ ರಾಜಕೀಯ ಮತ್ತು ಮತದಾನದಿಂದ ದೂರು ಉಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರಪಂಚದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಕೀರ್ತಿ ನಮ್ಮ ದೇಶಕ್ಕೆ ಸಲ್ಲುತ್ತದೆ. ಇಂತಹ ರಾಷ್ಟ್ರದಲ್ಲಿ ಯುವಕರು ಹೆಚ್ಚಾಗಿ ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಇತರರಿಗೆ ಮಾದರಿಯಾಗುವ ರೀತಿಯಲ್ಲಿ
ಕಾರ್ಯನಿರ್ವಹಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

ಎಸ್‌ಪಿ ಸೈದುಲು ಅಡಾವತ್‌ ಮಾತನಾಡಿ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ನಿಮ್ಮ ಕರ್ತವ್ಯವನ್ನು ನೀವು ಮಾಡಿ ಮುಂದೆ ನಿಮ್ಮಿಂದ ಆಯ್ಕೆಯಾಗುವ ಅಭ್ಯರ್ಥಿಯನ್ನು ಪ್ರಶ್ನಿಸುವ ಅಧಿಕಾರ ನಿಮಗೆ ಸಿಗುತ್ತದೆ. ಇತರರು ಮತ ಚಲಾಯಿಸುವಂತೆ ಅವರಲ್ಲಿ ಅರಿವು ಮೂಡಿಸುವ ಮೂಲಕ ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯಯವಾಗಿ ಭಾಗವಹಿಸುವಂತೆ ಮಾಡುವ ಕಾರ್ಯ ಇಂದಿನ ಯುವಜನತೆಯ ಮೇಲಿದೆ ಎಂದರು.

ಅಪರ ಜಿಲ್ಲಾ ಧಿಕಾರಿ ಪಿ.ಎಸ್‌.ಮಂಜುನಾಥ್‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌.ಮಲ್ಲೂರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.
ಮತದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಸಾಕ್ಷರತೆಗಾಗಿ ತಾಲೂಕು ಮಟ್ಟದ ಪ್ರಬಂಧ, ರಸಪ್ರಶ್ನೆ, ಪೋಸ್ಟರ್‌ ಮೇಕಿಂಗ್‌, ಕೋಲೇಜ್‌ ಮೇಕಿಂಗ್‌, ಹಾಗೂ ಭಿತ್ತಿಪತ್ರ ತಯಾರಿಕೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ತಶಸ್ತಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ‌, ಸಹಾಯಕ ಆಯುಕ್ತ ರಮೇಶ್‌ ಕೋನರೆಡ್ಡಿ ಹಾಗೂ ಜಿಲ್ಲಾಮಟ್ಟದ ಅ ಧಿಕಾರಿಗಳು ಇದ್ದರು.

Advertisement

ಓದಿ : ಸೂಗನಗೌಡಗೆ ಶೌರ್ಯ, ಕೃಷ್ಣೋಜಿಗೆ ವಿಶಿಷ್ಟ ಸೇವಾ ಪ್ರಶಸ್ತಿ

Advertisement

Udayavani is now on Telegram. Click here to join our channel and stay updated with the latest news.

Next