ಬಳ್ಳಾರಿ: ಕೋವಿಡ್ 2ನೇ ಅಲೆಯು ಮೊದಲಿಗಿಂತ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅ ಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲ ತಾಲೂಕುಗಳ ತಹಶೀಲ್ದಾರರು, ಆರೋಗ್ಯ ಇಲಾಖೆಯ ಅ ಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅ ಧಿಕಾರಿಗಳೊಂದಿಗೆ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಸಮಯದಲ್ಲಿ ಜಿಲ್ಲೆಯ ಎಲ್ಲ ಅ ಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದ್ದೀರಿ. ಅದರ ಅನುಭವ ಬಳಸಿಕೊಂಡು 2ನೇ ಅಲೆಯನ್ನು ನಿಯಂತ್ರಿಸುವುದಕ್ಕೆ ಮುಂದಾಗಬೇಕು. ಕೋವಿಡ್ 2ನೇ ಅಲೆಯ ಬಗ್ಗೆ ಜನರಲ್ಲಿ ಹೆದರಿಕೆ ಕಡಿಮೆ ಆಗಿದೆ. ವೈದ್ಯರು, ಅ ಧಿಕಾರಿಗಳು ಜನರಲ್ಲಿ ಕೋವಿಡ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಕೋವಿಡ್ ತಪಾಸಣಾ ಪ್ರಮಾಣ ಹೆಚ್ಚಳವಾಗಬೇಕು. ಸೋಂಕಿತರೊಂದಿಗಿನ ಸಂಪರ್ಕಿತರ ಪತ್ತೆಹಚ್ಚುವಿಕೆ (ಟ್ರೇಸಿಂಗ್) ವೇಗ ಪಡೆದುಕೊಳ್ಳಬೇಕು. ನಿಗದಿಪಡಿಸಿದ ಪ್ರಮಾಣದಲ್ಲಿ ಲಸಿಕೆ ನೀಡುವಿಕೆ ಕೆಲಸವಾಗಬೇಕು. ಕೋವಿಡ್ ಸೆಂಟರ್ ಗಳ ಗುರುತಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವ ಆನಂದಸಿಂಗ್ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಏನಾದರೂ ಅಗತ್ಯತೆಗಳಿದ್ದಲ್ಲಿ ಜಿಲ್ಲಾ ಧಿಕಾರಿಗಳ ಗಮನಕ್ಕೆ ತರುವಂತೆ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಾಟಿ ಮಾತನಾಡಿ, ಕೋವಿಡ್ ದೃಢಪಟ್ಟವರನ್ನು ಗುರುತಿಸಿ ಅವರ ಸಂಪರ್ಕದಲ್ಲಿ ಇದ್ದ ಕನಿಷ್ಠ 30 ಜನರನ್ನು ಟೆಸ್ಟ್ ಮಾಡಿ, ಅವರನ್ನು ಕ್ವಾರಂಟೈನ್ ಮಾಡುವ ಕೆಲಸ ಮಾಡಿ. ಹೋಂ ಕ್ವಾರೆಂಟೈನ್‌ನಲ್ಲಿರುವವನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸುವ ಕೆಲಸ ಮಾಡಬೇಕು. ಆಂಧ್ರದ ಗಡಿಭಾಗದಲ್ಲಿ ಚೆಕ್‌ಪೋಸ್ಟ್ ನಿರ್ಮಾಣ ಮಾಡಿ ಅಲ್ಲಿಯೇ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಕಾಲೇಜು ಮತ್ತು ವಸತಿ ನಿಲಯಗಳಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದರು.
ಸಂಸದ ವೈ.ದೇವೇಂದ್ರಪ್ಪ, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತರಾದ ರಮೇಶ್ ಕೋನರೆಡ್ಡಿ, ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹೊÉàಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್.ಎಲ್.ಜನಾರ್ಧನ್, ಜಿಲ್ಲಾ ಶಸ್ತ್ರ†ಚಿಕಿತ್ಸಕರಾದ ಡಾ| ಬಸರೆಡ್ಡಿ, ಜಿಲ್ಲಾ ಆರ್‌ಸಿಎಚ್ ಅ ಧಿಕಾರಿ ಡಾ| ಅನಿಲ್ ಕುಮಾರ್, ವಿಮ್ಸ್ ನಿರ್ದೇಶಕರಾದ ಗಂಗಾಧರ ಗೌಡ ಹಾಗೂ ಜಿಲ್ಲಾ ಮಟ್ಟದ ಅ ಧಿಕಾರಿಗಳು ಮತ್ತು ಇತರರು ಇದ್ದರು.