Advertisement

ಹಂಪಿ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ

05:52 PM Apr 20, 2021 | Team Udayavani |

ಹಗರಿಬೊಮ್ಮನಹಳ್ಳಿ: ಕಸಾಪ ರಾಜ್ಯ ಘಟಕ ಅಭ್ಯರ್ಥಿ ರಾಜಶೇಖರ್‌ ಮುಲಾಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಸಪೇಟೆ: ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಸ್ಮಾರಕಗಳ ವೀಕ್ಷಣೆಗೆ ಮೇ 15ರವರೆಗೆ ಭಾರತೀಯ ಪುರಾತತ್ವ ಇಲಾಖೆ ನಿಷೇ ಧಿಸಿ ಆದೇಶ ಹೊರಡಿಸಿದೆ. ಲಾಕ್‌ಡೌನ್‌ ತೆರವುಗೊಳಿಸಿದ ಬಳಿಕ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿತ್ತು. ಈಗ ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಹಂಪಿ ಸೇರಿದಂತೆ ದೇಶದ ರಾಷ್ಟ್ರೀಯ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ ವಿಧಿ ಸಿ ಆದೇಶಿಸಿದೆ. ಹೀಗಾಗಿ ಹಂಪಿಯಲ್ಲಿ ಸದಾ ಪ್ರವಾಸಿಗರಿಂದ ಲವಲವಿಕೆಯಾಗಿರುತ್ತಿದ್ದ ಸ್ಮಾರಕಗಳು ಈಗ ಪ್ರವಾಸಿಗರಿಲ್ಲದೇ ಖಾಲಿ ಖಾಲಿಯಾಗಿವೆ.

Advertisement

ಸ್ಮಾರಕಗಳು ಖಾಲಿ ಖಾಲಿ: ಹಂಪಿಯ ಕಮಲ ಮಹಲ್‌, ವಿಜಯ ವಿಠuಲ ದೇಗುಲ, ಕಲ್ಲಿನತೇರು, ಶ್ರೀಕೃಷ್ಣ ದೇಗುಲ, ಸಾಸಿವೆ ಕಾಳು ಗಣಪ, ಕಡಲೆಕಾಳು ಗಣಪ, ಉಗ್ರ ನರಸಿಂಹ, ಎದುರು ಬಸವಣ್ಣ ಮಂಟಪ, ಮಹಾನವಮಿ ದಿಬ್ಬ, ವರಾಹ ದೇಗುಲ, ಅಚ್ಯುತರಾಯ ದೇಗುಲ ಸೇರಿದಂತೆ ಹಂಪಿಯ ನಾನಾ ಸ್ಮಾರಕಗಳ ಬಳಿ ಪ್ರವಾಸಿಗರು ಇಲ್ಲದೇ ಖಾಲಿ ಹೊಡೆಯುತ್ತಿದೆ. ಹಂಪಿಯಲ್ಲಿ ಟಿಕೆಟ್‌ ಬುಕ್ಕಿಂಗ್‌ ಕಚೇರಿಗಳು ಕ್ಲೋಸ್‌ ಮಾಡಲಾಗಿದ್ದು, ನಿತ್ಯ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮ್ಯೂಸಿಯಂಗಳು ಕೂಡ ಬಂದ್‌ ಆಗಿವೆ.

ದೇಗುಲದಲ್ಲಿ ಪೂಜೆ: ಹಂಪಿ ಶ್ರೀವಿರೂಪಾಕ್ಷೇಶ್ವರ ದೇವಾಲಯದ ರಥಬೀದಿಯಲ್ಲೂ ಜನರಿಲ್ಲದಂತಾಗಿದೆ. ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆಮುಖವಾಗಿದೆ. ದೇಗುಲದಲ್ಲಿ ಪೂಜೆಗೆ ಅವಕಾಶ ಇದ್ದರೂ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಶ್ರೀವಿರೂಪಾಕ್ಷೇಶ್ವರ ದೇಗುಲದಲ್ಲಿ ಹಿಂದೂಧಾರ್ಮಿಕ ದತ್ತಿ ಇಲಾಖೆಯಿಂದ ನಿತ್ಯ ಪೂಜೆ ನಡೆಯಲಿದೆ. ದೇಗುಲದಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿ  ಧಿಸಿಲ್ಲ. ಹೀಗಾಗಿ ಭಕ್ತರು ಆಗಮಿಸಬಹುದು. ಜತೆಗೆ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ಹೇಳುತ್ತಾರೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅ ಧಿಕಾರಿಗಳು.

ವೀಕೆಂಡ್‌ಗೆ ಬರುತ್ತಿದ್ದ ಪ್ರವಾಸಿಗರು: ಹಂಪಿಯಲ್ಲಿ ಲಾಕ್‌ಡೌನ್‌ ಬಳಿಕ ವೀಕೆಂಡ್‌ನ‌ಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿತ್ತು. ಅದರಲ್ಲೂ ಸ್ಥಳೀಯ ಪೊಲೀಸರು ಪ್ರವಾಸಿಗರಿಗೆ ಮಾಸ್ಕ್ ಧರಿಸಲು ತಿಳಿ ಹೇಳುತ್ತಿದ್ದರೂ ನಿಯಮ ಪಾಲನೆಯಾಗುತ್ತಿರಲಿಲ್ಲ. ಈಗ ಪ್ರವಾಸಿಗರ ಪ್ರವೇಶ ನಿರ್ಬಂ ಧಿಸಿರುವುದರಿಂದ ಪ್ರಮುಖ ಪ್ರವಾಸಿ ತಾಣವಾಗಿರುವ ಹಂಪಿ, ಹೊಸಪೇಟೆ, ತುಂಗಭದ್ರಾ ಪ್ರದೇಶ, ದರೋಜಿ ಕರಡಿಧಾಮ ಹಾಗೂ ಅಟಲ್‌ ಬಿಹಾರಿ ಝೂಲಾಜಿಕಲ್‌ ಪಾರ್ಕ್‌ನಲ್ಲೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ.

ಬ್ಯಾಟರಿ ಚಾಲಿತ ವಾಹನಗಳ ಓಡಾಟ ಇಲ್ಲ: ಹಂಪಿ ಗೆಜ್ಜಲಮಂಟಪದಿಂದ ವಿಜಯ ವಿಠuಲ ದೇಗುಲದವರೆಗೆ ಹಂಪಿ ಅಭಿವೃದ್ಧಿ ಪ್ರಾ  ಧಿಕಾರದಡಿಯಲ್ಲಿ ನಡೆಯುತ್ತಿದ್ದ ಬ್ಯಾಟರಿ ಚಾಲಿತ ವಾಹನಗಳ ಓಡಾಟವನ್ನೂ ನಿಲ್ಲಿಸಲಾಗಿದೆ. ಹಂಪಿಯಲ್ಲಿ ಸ್ಮಾರಕಗಳ ವೀಕ್ಷಣೆಗೆ ಭಾರತೀಯ ಪುರಾತತ್ವ ಇಲಾಖೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಪ್ರಾಧಿ ಕಾರ ಈ ಕ್ರಮಕೈಗೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next